ಬೆಂಗಳೂರು: ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ಪ್ರಹಸನದ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
The recent resignation drama is nothing but a dirty plot by @BJP4Karnataka leaders. People have not given them the mandate for Assembly but they are desperate to gain backdoor entry.
If @narendramodi has little self respect, he should ask his stooges to act constitutionally.
— Siddaramaiah (@siddaramaiah) July 2, 2019
Advertisement
ಚುನಾವಣೆಯಲ್ಲಿ ಬಿಜೆಪಿ ಪರ ಜನತಾ ತೀರ್ಪು ಬಂದಿಲ್ಲ. ಆದರೆ ಅಧಿಕಾರ ಪಡೆಯಲು ಬಿಜೆಪಿಯವರು ಹಿಂಬಾಗಿಲ ಮೂಲಕ ಪ್ರಯತ್ನ ನಡೆಸಿದ್ದಾರೆ. ನರೇಂದ್ರ ಮೋದಿಯವರಿಗೆ ಕೊಂಚವಾದರೂ ಸ್ವಾಭಿಮಾನವಿದ್ದರೆ, ತಮ್ಮ ಪಕ್ಷದ ವಿದೂಷಕರಿಗೆ ಸಂವಿಧಾನಾತ್ಮಕವಾಗಿ ನಡೆದುಕೊಳ್ಳುವಂತೆ ಸೂಚಿಸಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
Advertisement
Advertisement
ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ಮೈತ್ರಿ ಸರ್ಕಾರದಲ್ಲಿ ಹೊಸ ಸಂಚಲನವನ್ನೇ ಹುಟ್ಟು ಹಾಕಿದೆ. ಈ ಕುರಿತು ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಕೆಂಡಾಮಂಡಲಾಗಿದ್ದಾರೆ. ಇದೆಲ್ಲ ಬಿಜೆಪಿ ಕೈವಾಡ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಯತ್ನಿಸುತ್ತಿದೆ. ಆದರೆ, ಇದು ಸಾಧ್ಯವಿಲ್ಲ ಇಬ್ಬರು ರಾಜೀನಾಮೆ ನೀಡಿದರೆ ಸರ್ಕಾರ ಬಿದ್ದು ಹೋಗಲ್ಲ. ಇಬ್ಬರ ಮನವೊಲಿಸುವ ಕಾರ್ಯ ನಡೆದಿದೆ. ಆಪರೇಷನ್ ಕಮಲದ ಹಿಂದೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕೈವಾಡವಿದೆ ಎಂದು ಇಂದು ಮಧ್ಯಾಹ್ನ ಆರೋಪಿಸಿದ್ದರು.