ನಿರ್ದೇಶಕ ಪ್ರಶಾಂತ್ ರಾಜ್ ಅವರ ತಮಿಳಿನ ‘ಕಿಕ್’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್

Public TV
1 Min Read
Kick

ನ್ನಡದ ಪ್ರತಿಭಾವಂತ ನಿರ್ದೇಶಕ ಪ್ರಶಾಂತ್ ರಾಜ್ (Prashanth Raj) ಅವರ ‘ಕಿಕ್’ ಸಿನಿಮಾದ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಪೋಸ್ಟರ್ ವೊಂದನ್ನು ರಿಲೀಸ್ (Release) ಮಾಡಿರುವ ಪ್ರಶಾಂತ್ ರಾಜ್, ಸೆಪ್ಟಂಬರ್ 1 ರಂದು ರಿಲೀಸ್ ಮಾಡುವುದಾಗಿ ತಿಳಿಸಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿದ್ದು, ಸಿನಿಮಾ ನಿರೀಕ್ಷೆ ಕೂಡ ಮೂಡಿಸಿದೆ.

Kick 1

ತಮ್ಮ ಚೊಚ್ಚಲು ತಮಿಳು ಚಿತ್ರಕ್ಕೆ ಕಿಕ್ (Kick) ಎಂದು ಹೆಸರಿಟ್ಟು ಕುತೂಹಲ ಮೂಡಿಸಿದ್ದರು ಪ್ರಶಾಂತ್ ರಾಜ್. ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಕನ್ನಡದ ಹಲವು ಪ್ರತಿಭೆಗಳನ್ನು ತಮ್ಮೊಂದಿಗೆ ತಮಿಳಿಗೂ ಕರೆದುಕೊಂಡು ಹೋಗಿದ್ದಾರೆ ನಿರ್ದೇಶಕರು. ಕಾಮಿಡಿ ಸಿನಿಮಾಗಳ ಮೂಲಕ ತಮಿಳಿನ ಪ್ರೇಕ್ಷಕರ ಮನ ಗೆದ್ದಿರುವ ಸಂತಾನಂ (Santhanam) ಈ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ಇದನ್ನೂ ಓದಿ:ಮಾಲಾಶ್ರೀ ಕೋರಿಕೆಯನ್ನ ಈಡೇರಿಸಿದ ದೈವ- ಕೊರಗಜ್ಜನ ಆದಿಸ್ಥಳಕ್ಕೆ ನಟಿ ಭೇಟಿ

Kick 2

ಬಸಣ್ಣಿ ಬಾ ಹಾಡಿನ ಖ್ಯಾತಿಯ ತಾನ್ಯ ಹೋಪ್ (Tanya Hope) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತುಪ್ಪದ ಬೆಡಗಿ ರಾಗಿಣಿ (Ragini) ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಅಲ್ಲದೇ ಹೆಸರಾಂತ ತಾರಾ ಬಳಗವೇ ಸಿನಿಮಾದಲ್ಲಿದೆ. ಸಿನಿಮಾದ ಮತ್ತೊಂದು ವಿಶೇಷ ಎಂದರೆ, ಕಾಮಿಡಿಗೆ ಒತ್ತು ನೀಡಲಾಗಿದೆ. ಹೆಸರಾಂತ ಕಾಮಿಡಿ ಕಲಾವಿದರೇ ತಾರಾ ಬಳಗದಲ್ಲಿ ಇದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

 

ಈ ಕುರಿತು ಮಾತನಾಡಿದ ಪ್ರಶಾಂತ್ ರಾಜ್, ‘ಬ್ರಹ್ಮಾನಂದಂ ನನ್ನಿಷ್ಟದ ನಟ. ಈ ಸಿನಿಮಾದಲ್ಲಿ ಕಾಮಿಡಿಗೂ ಹೆಚ್ಚು ಒತ್ತು ನೀಡಲಾಗಿದೆ. ಹಾಗಾಗಿ ಸಾಧು ಕೋಕಿಲಾ (Sadhu Kokila) ಕೂಡ ಸಿನಿಮಾದಲ್ಲಿ ಇದ್ದಾರೆ. ಈ ಸಿನಿಮಾದ ಮೂಲಕ ಫ್ರೆಶ್ ಆಗಿರುವ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದೇನೆ’ ಅಂತಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article