ಮಂಗಳೂರು: ರಸ್ತೆ ಅವ್ಯವಸ್ಥೆಯಿಂದಾಗಿ ಬಸ್ಸಿನ ರಾಡ್ ಸೊಂಟಕ್ಕೆ ತಾಗಿ ವ್ಯಕ್ತಿಯ ಬೆನ್ನು ಮೂಳೆ ಮುರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆದಿದೆ.
Advertisement
ವಿಜಯ್ ಕುಮಾರ್ ಬೆನ್ನು ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ. ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿಯಾಗಿರುವ ಇವರು, ಮೊಬೈಲ್ ಟೆಕ್ನೀಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಂತೆಯೇ ಇವರು ಮೊಬೈಲ್ ಬಿಡಿಭಾಗಕ್ಕಾಗಿ ಮಂಗಳೂರಿಗೆ ಬಂದಿದ್ದರು. ಮಂಗಳೂರಿನಿಂದ ಮತ್ತೆ ಬೆಳ್ಳಾರೆಗೆ ಹೋಗುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
Advertisement
Advertisement
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಲ್ಲಡ್ಕ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಈ ರಾಷ್ಟ್ರೀಯ ಹೆದ್ದಾರಿ ಬೃಹತ್ ಗುಂಡಿಗಳಿಂದ ಕೂಡಿದೆ. ವ್ಯಕ್ತಿ ಬಸ್ಸಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಸರ್ಕಾರಿ ಬಸ್ ರಸ್ತೆ ಗುಂಡಿಗೆ ಬಿದ್ದಿದೆ. ಈ ವೇಳೆ ವಿಜಯ್ ಸೀಟಿನಿಂದ ಮೇಲೆ ಹಾರಿದ್ದಾರೆ. ಪರಿಣಾಮ ಬಸ್ಸಿನ ರಾಡ್ ತಾಗಿ ವಿಜಯ್ ಕುಮಾರ್ ಬೆನ್ನಿಗೆ ಗಂಭೀರ ಪೆಟ್ಟು ಬಿದ್ದಿದೆ.
Advertisement
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯ್ ಅವರ ಬೆನ್ನು ಹುರಿ, ಕುತ್ತಿಗೆ ಭಾಗದ ಎಲುಬು ಜಖಂಗೊಂಡಿದೆ. ಬೆನ್ನು ಮೂಳೆ ಆಪರೇಷನ್ ಗೆ ವೈದ್ಯರು ಸೂಚಿಸಿದ್ದಾರೆ. ಸದ್ಯ ವಿಜಯ್ ಕುಮಾರ್ ಅವರು ಮಲಗಿದ ಸ್ಥಿತಿಯಲ್ಲೇ ಇದ್ದಾರೆ. ಇದನ್ನೂ ಓದಿ: ಎಸಿಬಿ ರದ್ದು; ಹೈಕೋರ್ಟ್ ಆದೇಶ ಪಾಲಿಸ್ತೀವಿ, ಸುಪ್ರೀಂಗೆ ಹೋಗಲ್ಲ – ಸಿಎಂ
ಘಟನೆ ಸಂಬಂಧ ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಎಂದು ದೂರು ನೀಡಲಾಗಿದ್ದು, ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.