ಚಿಕ್ಕೋಡಿ: ಚಿಕ್ಕೋಡಿ (Chikkodi) ಉಪವಿಭಾಗ ವ್ಯಾಪ್ತಿಯ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದ್ದು ಬಿರುಗಾಳಿ ಸಹಿತ ಭಾರೀ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿದೆ.
ಸೋಮವಾರ ಸಂಜೆ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಗೆ ಹಂಚಿನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಹಾರಿ ಹೋಗಿವೆ. ವಿದ್ಯಾರ್ಥಿಗಳು ಶಾಲೆ ಮುಗಿಸಿ ಮನೆಗೆ ಹೋದ ಮೇಲೆ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ರಷ್ಯಾವನ್ನು ಹಾಡಿ ಹೊಗಳಿ ಪಾಶ್ಚಿಮಾತ್ಯ ದೇಶಗಳಿಗೆ ಮಾತಿನಲ್ಲೇ ತಿವಿದ ಜೈಶಂಕರ್
ನಿನ್ನೆಯಷ್ಟೇ (ಸೋಮವಾರ) ದಸರಾ ಬಳಿಕ ಶಾಲೆ ಆರಂಭವಾಗಿತ್ತು. ಸಾಯಂಕಾಲ ಶಾಲೆಗೆ ಬಿಡುವಾದ ಕಾರಣ ಭಾರೀ ಅನಾಹುತ ತಪ್ಪಿದೆ. ಬಿರುಗಾಳಿಗೆ ಶಾಲೆಯ ಮೇಲಿದ್ದ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿ ಶಾಲಾ ಮುಂಭಾಗದಲ್ಲಿ ಬಿದ್ದಿದೆ. ಕಳಪೆ ಕಾಮಗಾರಿಯಿಂದ ಶಾಲೆಯ ಮೇಲ್ಛಾವಣಿ ಹಾರಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ವರುಣ ರೌದ್ರನರ್ತನ – ತಗ್ಗು ಪ್ರದೇಶ ಜಲಾವೃತ, ಕೆಟ್ಟು ನಿಂತ ವಾಹನಗಳು
ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ| ಭಾರೀ ಮಳೆಗೆ ಕಾಲುವೆಯಲ್ಲಿ ಕೊಚ್ಚಿಹೋಯಿತು ಎರಡು ಕಾರು