ಮುಂಬೈ: ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಬೃಹತ್ ಪ್ರತಿಮೆಯನ್ನು (Sachin Tendulkar Statue) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅನಾವರಣಗೊಳಿಸಲಾಗಿದೆ.
#WATCH | Maharashtra | Final touches being given to the statue of Cricket legend Sachin Tendulkar at Wankhede Stadium. The statue has been installed by MCA (Maharashtra Cricket Association) near Sachin Tendulkar Stand at the stadium. The statue is dedicated to the 50 years of his… pic.twitter.com/w1BmTJNsuJ
— ANI (@ANI) October 31, 2023
Advertisement
ಕ್ರಿಕೆಟ್ ಲೋಕದಲ್ಲಿ ಹಲವಾರು ದಾಖಲೆಗಳನ್ನು ಬರೆದಿರುವ ದಿಗ್ಗಜ ಕ್ರಿಕೆಟಿಗ ಸಚಿನ್ (Sachin Tendulkar) ಅವರ ಪಾಲಿಗೆ, ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣವು (Wankhede Stadium) ತುಂಬಾ ವಿಶೇಷ. ಹೀಗಾಗಿ ಅವರಿಗೆ ಗೌರವಾರ್ಥವಾಗಿ ಪ್ರತಿಮೆ ನಿರ್ಮಿಸಲಾಗಿದೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಪ್ರತಿಮೆ ಅನಾವರಣಗೊಳಿಸಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಗೆದ್ದರೂ ಪಟಾಕಿ ಸಿಡಿಸುವಂತಿಲ್ಲ – BCCI ಪಟಾಕಿ ಬ್ಯಾನ್ ಮಾಡಿದ್ದೇಕೆ?
Advertisement
ಕಾರ್ಯಕ್ರಮದಲ್ಲಿ ಸಚಿನ್ ತೆಂಡೂಲ್ಕರ್ ಪತ್ನಿ ಅಂಜಲಿ, ಪುತ್ರಿ ಸಾರಾ, ಸಹೋದರ ಅಜಿತ್ ಜೊತೆಗೆ ಪಾಲ್ಗೊಂಡಿದ್ದರು. ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಇದ್ದರು.
Advertisement
Advertisement
ಈ ವರ್ಷದ ಏಪ್ರಿಲ್‌ನಲ್ಲಿ ಸಚಿನ್ ಅವರು ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಹೀಗಾಗಿ ಪ್ರತಿಮೆಯನ್ನು ಅವರ 50 ವರ್ಷಗಳ ಅರ್ಥಪೂರ್ಣ ಬದುಕಿಗೆ ಸಮರ್ಪಿಸಲಾಗಿದೆ. ಇದನ್ನೂ ಓದಿ: ವಿಶ್ವಕಪ್‌ನ ಟಾಪ್ 7 ತಂಡಗಳು 2025 ರ ಚಾಂಪಿಯನ್ಸ್ ಟ್ರೋಫಿಗೆ – ಪಾಕಿಸ್ತಾನ ಡೈರೆಕ್ಟ್ ಎಂಟ್ರಿ
2011ರಲ್ಲಿ ಭಾರತ ವಿಶ್ವಕಪ್ ಗೆದ್ದ ಬಳಿಕ ವಾಂಖೆಡೆ ಸ್ಟೇಡಿಯಂನಲ್ಲಿಯೇ ಸಚಿನ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಹೀಗಾಗಿ ಅಲ್ಲಿ ಅವರ ಹೆಸರಿನ ಸ್ಟ್ಯಾಂಡ್ ಇದೆ. ಅಲ್ಲದೇ ಸಚಿನ್ ತಮ್ಮ 200ನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನೂ 2013ರ ನವೆಂಬರ್‌ನಲ್ಲಿ ವಾಂಖೆಡೆಯಲ್ಲಿ ಆಡಿದ್ದರು.
ಕ್ರಿಕೆಟ್‌ನಲ್ಲಿ ತೆಂಡೂಲ್ಕರ್ ಮಾಡಿರುವ ಹಲವು ದಾಖಲೆಗಳು ಇನ್ನೂ ಬ್ರೇಕ್ ಆಗಿಲ್ಲ. ಟೆಸ್ಟ್ ಕ್ರಿಕೆಟ್‌ನಲ್ಲಿ ಬರೋಬ್ಬರಿ 15,921 ರನ್‌ಗಳು ಹಾಗೂ ಏಕದಿನ ಸ್ವರೂಪದಲ್ಲಿ 18,426 ರನ್‌ಗಳನ್ನು ಸಿಡಿಸಿರುವ ಸಚಿನ್ ದಾಖಲೆಯನ್ನು ಇನ್ನೂ ಯಾರೂ ಮುರಿಯಲು ಸಾಧ್ಯವಾಗಿಲ್ಲ. ಆದ್ರೆ ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳ ದಾಖಲೆಯನ್ನು ಸದ್ಯದಲ್ಲೇ ವಿರಾಟ್ ಕೊಹ್ಲಿ ಅವರು ಮುರಿಯುವ ನಿರೀಕ್ಷೆ ಹೊಂದಿದ್ದಾರೆ.
Web Stories