ತಿರುವನಂತಪುರಂ: ಕೋಝಿಕ್ಕೋಡ್‌ನಲ್ಲಿ (Kozhikode) ಮೃತಪಟ್ಟ ಇಬ್ಬರಲ್ಲಿ ಓರ್ವ ವ್ಯಕ್ತಿಗೆ ನಿಫಾ ವೈರಸ್ (Nipah Virus) ತಗುಲಿರುವುದು ದೃಢಪಟ್ಟಿದೆ.
ಈ ಸಂಬಂಧ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಿಫಾ ಸೋಂಕಿನಿಂದಲೇ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
Advertisement
The sample of a person, who died at Kozhikode following fever and breathlessness on Monday, tested positive for #Nipahvirus, said health officials.
As soon as the result of the sample from National Institute of Virology Pune came, a central team of top officials from Delhi will… pic.twitter.com/otS8ByZDMI
— IANS (@ians_india) September 12, 2023
Advertisement
ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ವ್ಯಕ್ತಿ ಸೋಮವಾರ ಸಾವನ್ನಪ್ಪಿದ್ದರು. ನಿಫಾ ವೈರಸ್ ಸೋಂಕು ತಗುಲಿರುವ ಶಂಕೆಯ ಹಿನ್ನೆಲೆಯಲ್ಲಿ ಮೃತನ ಸ್ಯಾಂಪಲ್ ಅನ್ನು ಟೆಸ್ಟ್‌ಗೆ ಪುಣೆಗೆ ಕಳುಹಿಸಲಾಗಿತ್ತು. ಸದ್ಯ ಅದರ ರಿಪೋರ್ಟ್ ಬಂದಿದ್ದು, ನಿಫಾ ವೈರಸ್‌ನಿಂದಲೇ ಮೃತಪಟ್ಟಿರುವುದು ಬಯಲಾಗಿದೆ. ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಸ್ಯಾಂಪಲ್ ಫಲಿತಾಂಶ ಬಂದ ತಕ್ಷಣ ದೆಹಲಿಯಿಂದ ಉನ್ನತ ಅಧಿಕಾರಿಗಳ ಕೇಂದ್ರ ತಂಡ ಕೋಯಿಕ್ಕೋಡ್‌ಗೆ ಆಗಮಿಸಲಿದೆ.
Advertisement
ಇಬ್ಬರ ಸಾವು: ಕೋಝಿಕ್ಕೋಡ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿತ್ತು. ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ.
Advertisement
ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಝಿಕ್ಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮನವಿ ಮಾಡಿದ್ದಾರೆ.
ನಿಫಾ ವೈರಸ್ ಎಂದರೇನು?: 1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.
ವೈರಸ್ ಹೇಗೆ ಹರಡುತ್ತದೆ?: ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನವುದರಿಂದ ವೈರಸ್ ಹರಡುವ ಸಾಧ್ಯತೆಗಳಿವೆ. ಅಲ್ಲದೆ ಇದೊಂದು ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.
ನಿಫಾ ವೈರಸ್ ಲಕ್ಷಣಗಳೇನು?
* ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
* ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
* ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
* ಬಳಿಕ ಪ್ರಜ್ಞಾಹೀನರಾಗುತ್ತಾರೆ
* ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
* ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು
Web Stories