ಉಡುಪಿ: ರಾಜ್ಯದಲ್ಲಿ ಹಿಜಬ್ ಹೋರಾಟ ಜೋರಾಗಿದೆ. ಹಿಜಬ್ ವಿವಾದದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಲಾಗಿದೆ.
Advertisement
ಹೌದು, ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಸೈನ್ಸ್ ವಿದ್ಯಾರ್ಥಿಗಳ ಪ್ರಾಕ್ಟಿಕಲ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಗಳು ಆರಂಭವಾಗಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಇರುವ ತರಗತಿಯಲ್ಲಿ ಯಾವುದೇ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂಬ ಉದ್ದೇಶದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ನಮಗೆ ಆಜಾದಿ ಬೇಕು ಅಂತಾ ಘೋಷಣೆ ಕೂಗ್ತಿಯಾ? ನಿನ್ನನ್ನು ಅಟ್ಟಾಡಿಸಿ ಹೊಡೀತಿವಿ: ಸೀಮಾ ಇನಾಂದಾರ್‌ಗೆ ಜೀವ ಬೆದರಿಕೆ
Advertisement
Advertisement
ಸದ್ಯ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಹೇಳಿರುವ ಎಂಜಿಎಂ ಕಾಲೇಜು ತಿಳಿಸಿದೆ. ಫೆಬ್ರವರಿ 7ರಂದು ಎಂಜಿಎಂ ಕಾಲೇಜಿನಲ್ಲಿ ಕೇಸರಿ ಹಿಜಬ್ ಫೈಟ್ ನಡೆದಿತ್ತು. ಇದೀಗ ರಾಜ್ಯಾದ್ಯಂತ ಹಿಜಬ್ ಪ್ರತಿಭಟನೆ ನಡೆಯುತ್ತಿದ್ದು, ಹೈಕೋರ್ಟ್ ತನ್ನ ಮುಂದಿನ ಆದೇಶದವರೆಗೂ ಶಾಲಾ, ಕಾಲೇಜುಗಳಿಗೆ ಹಿಜಬ್ ಧರಿಸದೇ ವಿದ್ಯಾರ್ಥಿನಿಯರು ಹಾಜರಾಗಬೇಕೆಂದು ಸೂಚಿಸಿದೆ. ಆದರೂ ವಿದ್ಯಾರ್ಥಿನಿಯರು ಕೋರ್ಟ್ ಆದೇಶಕ್ಕೆ ಕೇರ್ ಮಾಡದೇ ಹಿಜಬ್ ಧರಿಸಿಯೇ ತರಗತಿಗೆ ಹಾಜರಾಗುತ್ತಿದ್ದಾರೆ. ಇದನ್ನೂ ಓದಿ: ಮುಸ್ಲಿಂ ವೇಶ ಧರಿಸಿ ಅನುಮಾಸ್ಪದ ರೀತಿಯಲ್ಲಿ ಓಡಾಟ: ಐವರನ್ನು ವಶಕ್ಕೆ ಪಡೆದ ಪೊಲೀಸರು