Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಹೊಸ ಸಿನಿಮಾದ ಶೂಟಿಂಗ್ ಶುರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಹೊಸ ಸಿನಿಮಾದ ಶೂಟಿಂಗ್ ಶುರು

Cinema

ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಹೊಸ ಸಿನಿಮಾದ ಶೂಟಿಂಗ್ ಶುರು

Public TV
Last updated: June 4, 2022 3:55 pm
Public TV
Share
2 Min Read
upendra new film 2 1
SHARE

ಕನ್ನಡ ಸಿನಿಮಾ ರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಉಪೇಂದ್ರ ‘ಉಪ್ಪಿ ೨’ ಚಿತ್ರದ ನಂತರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆ ಶುಭಘಳಿಗೆ ಈಗ ಬಂದಿದೆ.‌ ಉಪೇಂದ್ರ ನಿರ್ದೇಶಿಸಿ, ನಾಯಕರಾಗೂ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ  ಸುದೀಪ್ ಆರಂಭ ಫಲಕ ತೋರಿದರೆ,  ಶಿವರಾಜಕುಮಾರ್ ಕ್ಯಾಮೆರಾ ಚಾಲನೆ ನೀಡಿದರು. ಈ ಸಮಾರಂಭಕ್ಕೆ ಗೀತಾ ಶಿವರಾಜಕುಮಾರ್, ಡಾಲಿ ಧನಂಜಯ, ವಸಿಷ್ಠ ಸಿಂಹ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.

upendra new film 1 1

ಲಹರಿ ಫಿಲಂಸ್ ಹಾಗೂ VENUS entertainers ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶನದೊಂದಿಗೆ ಉಪೇಂದ್ರ ನಾಯಕರಾಗೂ ನಟಿಸುತ್ತಿದ್ದಾರೆ. ಮೂರುನಾಮದ ಚಿಹ್ನೆಯೊಂದು ಈ ಚಿತ್ರದ ಶೀರ್ಷಿಕೆಯಾಗಿದೆ. ಇದನ್ನು ಕೆಲವರು ಮೂರು ನಾಮ ಅಂದುಕೊಂಡರೆ, ಮತ್ತೆ ಕೆಲವರು ಯು ಮತ್ತು ಐ ಅಂದುಕೊಳ್ಳುತ್ತಾರೆ. ನಾನು ಮತ್ತು ನೀನು ಎಂಬ ಅರ್ಥ ಬರುವ ಹಾಗಿದೆ ಆ ಚಿಹ್ನೆ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

upendra new film 3 1

ಒಟ್ಟಿನಲ್ಲಿ ತಮ್ಮ ಹಿಂದಿನ ಚಿತ್ರಗಳಲ್ಲಿ ವಿಭಿನ್ನ ಶೀರ್ಷೆಕೆಯಿಟ್ಟು ಎಲ್ಲರ ತಲೆಗೆ ಕೆಲಸ ಕೊಡುತ್ತಿದ್ದ ಉಪೇಂದ್ರ ಅವರು ಈ ಚಿತ್ರದಲ್ಲೂ ಹಾಗೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಉಪೇಂದ್ರ, “ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದೇವೆ. ಲಹರಿ ಸಂಸ್ಥೆಯವರು ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ವಿಭಿನ್ನ ಶೀರ್ಷಿಕೆ ಯಿಟ್ಟಿದ್ದೀನಿ. ನಿಮಗೆಲ್ಲಾ ಏನು ಅನಿಸುತ್ತದಯೋ, ಅದೇ ಶೀರ್ಷಿಕೆ ಆಗಿರುತ್ತದೆ. ನಾನು ಕಥೆ ಸಿದ್ದಮಾಡಿಕೊಂಡಿರುತ್ತೇನೆ. ಮತ್ತೆ ಬೇರೆ ಅಲೋಚನೆ ಬಂದರೆ, ಬದಲಿಸುತ್ತೀನಿ. ಚಿತ್ರದ ಶೀರ್ಷಿಕೆ ಹಾಗೂ ಕುದುರೆ ಪೋಸ್ಟರ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ಅದರ ಬಗ್ಗೆ ಒಬ್ಬೊಬ್ಬರ ಮನಸ್ಸಿನಲ್ಲಿ ಒಂದೊಂದು ಹೊಳೆಯುತ್ತಿದೆ. ನಿಮ್ಮಗೆಲ್ಲಾ ಏನು ಅನಿಸುವುದೊ, ಅದು ಚಿತ್ರದಲ್ಲಿ ಇರುತ್ತದೆ. ನಾನು ನನ್ನ ನಿರ್ದೇಶಕರ ತಂಡ ಹಾಗೂ ಇನ್ನೂ ಕೆಲವರ ಬಳಿ ಕಥೆಯ ಬಗ್ಗೆ ಹೇಳಿರುತ್ತೇನೆ. ಅವರಿಗೆ ಅದನ್ನು ಹೇಳಲು ಬರುವುದಿಲ್ಲ ಎಂದ ಉಪೇಂದ್ರ ಅವರು ಒಟ್ಟಿನಲ್ಲಿ ಉತ್ತಮ ಚಿತ್ರವೊಂದನ್ನು ನಿಮ್ಮ ಮುಂದೆ ಇಡುತ್ತೇನೆ” ಎಂದಿದ್ದಾರೆ.

upendra new film 4

ಕಲಾವಿದರು ಹಾಗೂ ತಾಂತ್ರಿಕವರ್ಗದ ಕುರಿತು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಉಪೇಂದ್ರ ಹೇಳಿದರು.ಉಪೇಂದ್ರ ಅವರು ನಿರ್ದೇಶನಕ್ಕೆ ಒಪ್ಪಿರುವುದು ಖುಷಿಯಾಗಿದೆ. ಶಿವಣ್ಣ ಹಾಗೂ ಗೀತಕ್ಕ ಅವರ ಆಶೀರ್ವಾದದಿಂದ ಮೂರನೇ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಖ್ಯಾತ ಲಹರಿ ಫಿಲಂಸ್ ನವರು ನಾವು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ನಿಮ್ಮ ಹಾರೈಕೆ ಇರಲಿ ಎಂದರು ಕೆ.ಪಿ.ಶ್ರೀಕಾಂತ್. ಇದನ್ನೂ ಓದಿ : ಹಾಸ್ಯನಟ ನರಸಿಂಹರಾಜು ಹಿರಿಯ ಪುತ್ರಿ, ನಿರ್ದೇಶಕ ಅರವಿಂದ್ ತಾಯಿ ಧರ್ಮವತಿ ನಿಧನ

upendra new film 5

ನಾನು ಹಾಗೂ ಉಪೇಂದ್ರ ಅವರು ಸಹಪಾಠಿಗಳು. ತುಂಬಾ ವರ್ಷಗಳಿಂದ ಅವರು ಪರಿಚಯ. ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವೆಂದರು ಲಹರಿ ವೇಲು. ಲಹರಿ ಸಂಸ್ಥೆಯ ಮನೋಹರ್ ನಾಯ್ಡು, ನವೀನ್, ಕಾಕ್ರೋಜ್ ಸುಧಿ, ನಟಿ ತ್ರಿವೇಣಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

TAGGED:dhananjayLahari VeluManohar NaiduNew CinemaShivraj Kumarsudeepupendraಉಪೇಂದ್ರಧನಂಜಯ್ಮನೋಹರ್ ನಾಯ್ಡುಲಹರಿ ವೇಲುಶಿವರಾಜ್ ಕುಮಾರ್ಸುದೀಪ್ಹೊಸ ಸಿನಿಮಾ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
3 minutes ago
Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
41 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
50 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
1 hour ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
2 hours ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?