– ಮಂಗಳೂರಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
– ಟೈರ್‌ಗೆ ಬೆಂಕಿ, ಬಸ್‌ಗೆ ಕಲ್ಲು ತೂರಾಟ
ಮಂಗಳೂರು: ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೂ ಬರಬಹುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಮಂಗಳೂರಿನ ಲಾಲ್‌ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ವೇಳೆ ಕಾರ್ಯಕರ್ತರು ಭಾರಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ರಾಜ್ಯಪಾಲರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಮಾತನಾಡಿದ ಐವನ್ ಡಿಸೋಜ, ರಾಜ್ಯಪಾಲರನ್ನು ವಾಪಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು. ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ಸ್ಥಿತಿ ಬರಬಹುದು ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದಾನೆ. ಮಂಗಳೂರು ನಗರ ಪಾಲಿಕೆಯ ಎದುರು ಪ್ರತಿಭಟನೆ ವೇಳೆ ರಸ್ತೆ ತಡೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಖಾಸಗಿ ಬಸ್ಸಿನ ಮುಂಭಾಗದ ಗ್ಲಾಸ್‌ಗೆ ಕಲ್ಲು ತೂರಾಟ ನಡೆಸಿದ್ದಾರೆ.