ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಲೈಗೈದಿರುವ ಘಟನೆ ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯ (Byadarahalli) ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಮೃತ ತಂದೆಯನ್ನು ಮಾಜಿ ಸೈನಿಕ ಚನ್ನಬಸಪ್ಪ (61) ಎಂದು ಗುರುತಿಸಲಾಗಿದ್ದು, ನಿವೃತ್ತಿ ಬಳಿಕ ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿಯನ್ನು ಅಮಿತ್ (21) ಎಂದು ತಿಳಿಯಲಾಗಿದೆ. ಯಾವುದೇ ಕೆಲಸಕ್ಕೆ ಹೋಗದೇ ಎಣ್ಣೆ, ಮಾದಕ ವಸ್ತುವಿನ ದಾಸನಾಗಿದ್ದ ಅಮಿತ್‌ಗೆ ತಂದೆ ಬುದ್ಧಿವಾದ ಹೇಳುತ್ತಿದ್ದರು. ಇದೇ ವಿಚಾರವಾಗಿಯೂ ಪ್ರತಿ ದಿನ ಅಪ್ಪ ಮಗನ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ.ಇದನ್ನೂ ಓದಿ: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲಿ ಪಲ್ಟಿಯಾಗಿ ಹೊತ್ತಿ ಉರಿದ ವಿಮಾನ!
ಸೋಮವಾರ ಸಂಜೆ ಇದೇ ವಿಚಾರಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ಚನ್ನಬಸವಯ್ಯ ಮಗನಿಗೆ ಬೈದಿದ್ದಾರೆ. ಒಳ್ಳೆಯ ಬಟ್ಟೆ ಹಾಕಿಕೊಂಡು ಕೆಲಸಕ್ಕೆ ಹೋಗು ಎಂದು ತಿಳಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ಎದೆಗೆ ಚಾಕುವಿನಿಂದ ಇರಿದಿದ್ದು, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಇನ್ನೂ ಕೊಲೆ ಮಾಡಿ, ಎಣ್ಣೆ ಮತ್ತಲ್ಲಿ ಮನೆಯಲ್ಲಿ ಮಲಗಿದ್ದ ಆರೋಪಿ ಅಮಿತ್ ಮೇಲೆ ನೀರು ಹಾಕಿ ಎಬ್ಬಿಸಿ ಬ್ಯಾಡರಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ