ಅ.6ಕ್ಕೆ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಬಯೋಪಿಕ್ ತೆರೆಗೆ

Public TV
1 Min Read
800 Films 2

ಶ್ರೀಲಂಕಾ ಕ್ರಿಕೆಟ್ (Cricket) ತಂಡದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ (Muttiah Muralitharan) ಬಯೋಪಿಕ್ (Biopic) ಕೊನೆಗೂ ರಿಲೀಸ್ ಗೆ ರೆಡಿಯಾಗಿದೆ. ನಟ ಮಧುರ್ ಮಿತ್ತಲ್ (Madhur Mittal) ಅವರು ಮುತ್ತಯ್ಯ ಅವರ ಪಾತ್ರದಲ್ಲಿ ನಟಿಸಿದ್ದು, ಈ ಸಿನಿಮಾ ಇದೇ ಅಕ್ಟೋಬರ್ 6ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಣೆ ಮಾಡಿದೆ.

800 Films 1

ಕ್ರೀಡಾರಂಗದಲ್ಲಿ ಈಗಾಗಲೇ ಭಾಗ್ ಮಿಲ್ಕಾ ಭಾಗ್, ಮೇರಿ ಕೋಮ್, ಎಂಎಸ್ ಧೋನಿ, ಅಜರ್, ದಂಗಲ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಸಿನಿಮಾಗಳು ನಿರ್ಮಾಣವಾಗಿದೆ. ಈ ಸಾಲಿಗೆ ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಜೀವನ ಆಧರಿಸಿ ಸಿನಿಮಾ ಕೂಡ ಸೇರಿಕೊಂಡಿದೆ.

Muttiah Muralitharan

ಮುರಳೀಧರನ್ ಅವರ ಬಯೋಪಿಕ್ ಸಿನಿಮಾವನ್ನು ಮೂವಿ ಟ್ರೈನ್ ಮೋಷನ್ ಪಿಕ್ಚರ್ಸ್ ಸಂಸ್ಥೆ ನಿರ್ಮಾಣ ಮಾಡುತ್ತಿದ್ದು, ಎಂಎಸ್ ಶ್ರೀಪತಿ ನಿರ್ದೇಶನ ಮಾಡುತ್ತಿದ್ದಾರೆ. ಈ ಬಯೋಪಿಕ್ ಸಿನಿಮಾಗೆ ‘800’ ಎಂಬ ಟೈಟಲ್ ಇಡಲಾಗಿದೆ.

 

ಇತ್ತ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಸಾಕಷ್ಟು ದಾಖಲೆಗಳನ್ನು ನಿರ್ಮಿಸಿರುವ ಮುತ್ತಯ್ಯ ಮುರಳೀಧರನ್, ಟೆಸ್ಟ್ ಕ್ರಿಕೆಟ್‍ನಲ್ಲಿ 800 ವಿಕೆಟ್ ಪಡೆದು ಇತಿಹಾಸ ನಿರ್ಮಿಸಿದ್ದರು. ಏಕದಿನ ಕ್ರಿಕೆಟ್‍ನಲ್ಲಿ 534 ವಿಕೆಟ್ ಪಡೆದಿದ್ದ ಅವರು, 2011ರಲ್ಲಿ ವಿಶ್ವಕಪ್ ಫೈನಲ್ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಿದ್ದರು. ಉಳಿದಂತೆ ಮುರಳೀಧರನ್ 2015ರಿಂದಲೂ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article