ಬೆಂಗಳೂರು: ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಲೋಪ ಮಾಡುವ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಎಚ್ಚರಿಕೆ ಸಂದೇಶ ಕೊಟ್ಟಿದೆ. ಈ ಬಾರಿ ಶಿಕ್ಷಕರು ಮೌಲ್ಯಮಾಪನದಲ್ಲಿ ಲೋಪ ಮಾಡಿದರೆ ಅಂತಹ ಶಿಕ್ಷಕರನ್ನು ಕಪ್ಪು ಪಟ್ಟಿಗೆ ಸೇರಿಸುವ ಎಚ್ಚರಿಕೆಯನ್ನು ಎಸ್‍ಎಸ್‍ಎಲ್‍ಸಿ ಬೋರ್ಡ್ ನೀಡಿದೆ.
ಪ್ರತಿ ವರ್ಷವೂ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನದಲ್ಲಿ ಲೋಪಗಳು ಹೆಚ್ಚಾಗಿ ಕಂಡು ಬರುತ್ತಿತ್ತು. ಶಿಕ್ಷಕರು ಮಾಡುವ ಲೋಪದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆ ಆಗುತ್ತಿತ್ತು. ಇದನ್ನು ಸರಿಪಡಿಸಲು ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಮಾಡಿದೆ. ಈ ವರ್ಷದ ಮೌಲ್ಯಮಾಪನದಲ್ಲಿ ಲೋಪ ಮಾಡುವ ಶಿಕ್ಷಕರನ್ನು ಕಪ್ಪು ಪಟ್ಟಿಗೆ ಸೇರಿಸುವ ಜೊತೆಗೆ ಮುಂದಿನ ವರ್ಷದ ಮೌಲ್ಯಮಾಪನ ಕೆಲಸದಿಂದಲೂ ಇಂತಹ ಶಿಕ್ಷಕರನ್ನ ಕೈ ಬಿಡಲು ಎಸ್‍ಎಸ್‍ಎಲ್‍ಸಿ ಬೋರ್ಡ್ ನಿರ್ಧಾರ ಮಾಡಿದೆ.ಇದನ್ನೂ ಓದಿ : ತಾಳಿಕಟ್ಟಿ ಹೆಂಡತಿಯನ್ನು ಎತ್ತಿಕೊಂಡ ರಣಬೀರ್ ಕಪೂರ್
ಈ ವರ್ಷದ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಪ್ರಕ್ರಿಯೆ ಏಪ್ರಿಲ್ 21ರಿಂದ ಪ್ರಾರಂಭ ಆಗಲಿದೆ. ಮೌಲ್ಯಮಾಪನಕ್ಕೆ 60 ಸಾವಿರ ಶಿಕ್ಷಕರನ್ನು ಎಸ್‍ಎಸ್‍ಎಲ್‍ಸಿ ಬೋರ್ಡ್ ನಿಯೋಜನೆ ಮಾಡಿದೆ. ಒಬ್ಬ ವಿದ್ಯಾರ್ಥಿಗೂ ಅನ್ಯಾಯ ಆಗಬಾರದು ಅಂತ ಇಲಾಖೆ ಈ ಕ್ರಮ ತೆಗೆದುಕೊಂಡಿದೆ. ಕಪ್ಪು ಪಟ್ಟಿಯ ಜೊತೆಗೆ ದಂಡದ ಪ್ರಮಾಣವನ್ನು ಇಲಾಖೆ ಹೆಚ್ಚಳ ಮಾಡಿದೆ. ಮೌಲ್ಯಮಾಪನ ಲೋಪ ಮಾಡುವ ಶಿಕ್ಷಕರಿಗೆ 2 ಸಾವಿರ ರೂಪಾಯಿವರೆಗೂ ದಂಡ ವಿಧಿಸಲು ನಿರ್ಧಾರ ಮಾಡಿದೆ. ಇದನ್ನೂ ಓದಿ: ‘BOSS’ ಪಟ್ಟ ಅಲಂಕರಿಸಿದ ಯಶ್ : ಟ್ವಿಟರ್ ಟ್ರೆಂಡಿಂಗ್ ನಲ್ಲಿ #YASHBOSS
2019-20 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನದಲ್ಲಿ ಅನೇಕ ಶಿಕ್ಷಕರು ಹೆಚ್ಚು ಲೋಪಗಳನ್ನು ಮಾಡಿದ್ದರು. ವಿಧಾನ ಪರಿಷತ್ ಕಲಾಪದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೇ ಮೌಲ್ಯಮಾಪನದಲ್ಲಿ ಸಮಸ್ಯೆ ಆಗಿರುವುದು ಸತ್ಯ ಅಂತ ಒಪ್ಪಿಕೊಂಡಿದ್ದರು. 4317 ಶಿಕ್ಷಕರು ಅಸಮರ್ಪಕ ಮೌಲ್ಯಮಾಪನ ಮಾಡಿದ್ದಾರೆ. ಇವರಿಗೆ 51,26,600 ದಂಡ ವಿಧಿಸಲಾಗಿದೆ. ಇದರಲ್ಲಿ 10,56,400 ದಂಡ ವಸೂಲಿ ಮಾಡಲಾಗಿದೆ ಅಂತ ಸದನಕ್ಕೆ ಮಾಹಿತಿ ನೀಡಿದ್ದರು. ಈ ಬಾರಿ ಇಂತಹ ಸಮಸ್ಯೆ ಆಗದೇ ಇರಲು ಶಿಕ್ಷಣ ಇಲಾಖೆ ಕಠಿಣ ಕ್ರಮ ತೆಗೆದುಕೊಂಡಿದೆ.