ಹಾಸನ: ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ರದ್ದು ಮಾಡುವುದಾಗಿ ಕಳೆದ ಬಜೆಟ್‌ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು. ಅದರಂತೆ ಮುಂದಿನ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ರದ್ದುಗೊಳಿಸಿ, ರಾಜ್ಯ ಶಿಕ್ಷಣ ನೀತಿಯನ್ನು (State Education Policy) ಜಾರಿಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ (MC Sudhakar) ಹೇಳಿದ್ದಾರೆ.
ಅರಸೀಕೆರೆ ನಗರದಲ್ಲಿ ನೂತನ ಎಂಜಿನಿಯರಿಂಗ್ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ 2021 ರಲ್ಲಿ ಎನ್‌ಇಪಿ ಜಾರಿಗೊಳಿಸಿತ್ತು. ಯಾವುದೇ ಪೂರ್ವ ತಯಾರಿ ಇಲ್ಲದೇ, ಜಾರಿ ಮಾಡಿರುವುದರಿಂದ ಅದರಲ್ಲಿ ಸಾಕಷ್ಟು ನ್ಯೂನತೆ ಕಂಡುಬಂದಿದೆ. ಆದ್ದರಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ; ಸರ್ಕಾರದ ವಿರುದ್ಧ ಹೆಚ್.ಡಿ ರೇವಣ್ಣ ಕಿಡಿ
Advertisement
Advertisement
ರಾಜ್ಯದ ಹಲವು ಕಡೆಗಳಲ್ಲಿ NEP ಜಾರಿಯಾದ ನಂತರ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಅನೇಕ ಕಡೆಗಳಲ್ಲಿ ಮೂಲ ಸೌಕರ್ಯವಿಲ್ಲದ ಕಾರಣ ರಾಜ್ಯದಲ್ಲಿ ಎನ್‌ಇಪಿ ಜಾರಿಗೆ ಪೂರಕ ವಾತಾವರಣವಿಲ್ಲ. ಎನ್‌ಇಪಿ ವಿಷಯಗಳೇ ಬೇರೆ, ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಿಷಯಗಳೇ ಬೇರೆ ಇರುವುದರಿಂದಲೇ ಮಕ್ಕಳಿಗೆ ತೊಂದರೆಯಾಗಿದೆ. ಅದರಲ್ಲೂ ಗ್ರಾಮೀಣ ಮಕ್ಕಳಿಗೆ ಅನೇಕ ರೀತಿಯ ಸಮಸ್ಯೆಯುಂಟಾಗಿದೆ. ಆದ್ದರಿಂದ ಎಲ್ಲ ವರ್ಗ, ಜಾತಿಗಳನ್ನು ಒಳಗೊಂಡ ಶಿಕ್ಷಣ ನೀತಿಯನ್ನ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement
ಅರಸೀಕೆರೆ ಎಂಜಿನಿಯರಿಂಗ್ ಕಾಲೇಜು ಕಾಮಗಾರಿ 4 ವರ್ಷಗಳಾದರೂ ಮುಗಿದಿಲ್ಲ. ಸ್ಥಳೀಯ ಶಾಸಕರು ನನ್ನ ಗಮನಕ್ಕೆ ತಂದ ನಂತರ ಕಾಮಗಾರಿ ಶೀಘ್ರ ಮುಗಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement
ಇನ್ನೂ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ವಿಳಂಬವಾಗುತ್ತಿರುವ ಸಂಬಂಧ ಮಾತನಾಡಿ, ವಿದ್ಯಾರ್ಥಿ ವೇತನ ಮೊದಲಿನಂತೆಯೇ ಪಾವತಿಯಾಗುತ್ತಿದೆ. ಕೇಂದ್ರ ಸರ್ಕಾರ ಡಿಬಿಟಿ ಪದ್ಧತಿ ಮಾಡಿದೆ. 60% ಕೇಂದ್ರ, 40% ರಾಜ್ಯದ್ದು ಎಂದು ಮಾಡಿರುವುದರಿಂದ ಕೆಲ ಕಾಲೇಜುಗಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಇದನ್ನೇ ನೆಪವಾಗಿಟ್ಟುಕೊಂಡು ಎಸ್ಸಿ-ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ತೊಂದರೆ ಕೊಡಬಾರದು ಎಂದು ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ನಾನು ಬದುಕಿರುವವರೆಗೂ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಲು ಬಿಡಲ್ಲ – HD ರೇವಣ್ಣ ಗುಡುಗು
ಅಲ್ಲದೇ, ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ಎರಡೂವರೆ ಲಕ್ಷ ಹುದ್ದೆಗಳನ್ನು ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರಲ್ಲದೇ, ರಾಜ್ಯದಲ್ಲಿ ಹಲವು ವಿವಿ ಇದ್ದರೂ, ಕೊನೇ ದಿನಗಳಲ್ಲಿ ತಲಾ 2 ಕೋಟಿ ರೂ. ಅನುದಾನ ನೀಡಿ 7 ವಿವಿಗಳ ಆರಂಭಕ್ಕೆ ಹಿಂದಿನ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು. ಈ ಬಗ್ಗೆ ಕೂಲಂಕಷ ಅಧ್ಯಯನ ಮಾಡಿದ್ದೇವೆ. ಆದರೆ ಹೊಸ ವಿವಿಗಳನ್ನು ರದ್ದು ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.
Web Stories