ಬೆಂಗಳೂರು: ಸಿದ್ದರಾಮಯ್ಯ (Siddaramaiah) ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದಕ್ಕೆ ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ (Basavaraj Rayareddy) ಹೇಳಿಕೆಯೇ ಸಾಕ್ಷಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜೆಪಿ ಭವನದಲ್ಲಿ ಮಾತನಾಡಿದ ಅವರು, ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸಿಎಂ ಆರ್ಥಿಕ ಸಲಹೆಗಾರರೇ ಹೇಳಿದ್ದಾರೆ. ಇಷ್ಟು ಮುಕ್ತವಾಗಿ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವುದಕ್ಕೆ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದರು. ಇದನ್ನೂ ಓದಿ: ಇನ್ನು ಮುಂದೆ ಹೊಟೇಲ್‌ಗಳಲ್ಲಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವಿಲ್ಲ – ಫೇಸ್ ಐಡಿಯಲ್ಲೇ ದೃಢೀಕರಣ
ಕರ್ನಾಟಕ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ರಾಯರೆಡ್ಡಿ ಹೇಳಿದ್ದಾರೆ. ಹಿಂದೆಯೂ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಮೇಲೆ ಪರಿಣಾಮ ಬೀರಿದೆ. ಅಭಿವೃದ್ಧಿಗೆ ಹಣ ಕೊಡಲು ಆಗುತ್ತಿಲ್ಲ. ಅಭಿವೃದ್ಧಿ ಕುಂಠಿತವಾಗಿದೆ ಅಂತ ಅವರೇ ಹೇಳಿದ್ದಾರೆ. ಇದೆಲ್ಲ ರಾಜ್ಯ ಸರ್ಕಾರ ಹೇಗೆ ಆಡಳಿತ ಮಾಡುತ್ತಿದೆ, ಸರ್ಕಾರದ ವೈಫಲ್ಯ ಏನು ಎಂದು ಗೊತ್ತಾಗುತ್ತಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸ್ತಿದ್ದ ಇಬ್ಬರು ಅರೆಸ್ಟ್ – 3 ಮೊಬೈಲ್ ಸೇರಿ 6.99 ಲಕ್ಷ ರೂ. ನಗದು ಜಪ್ತಿ