Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ: ಡಿಕೆಶಿ

Bengaluru City

ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ: ಡಿಕೆಶಿ

Public TV
Last updated: August 19, 2025 10:48 pm
Public TV
Share
3 Min Read
DK Shivakumar 5
SHARE

– ನಾವೆಲ್ಲರೂ ಒಟ್ಟಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ ಎಂದ ಡಿಸಿಎಂ

ಬೆಂಗಳೂರು: ಕಳಸಾ ಬಂಡೂರಿ ಯೋಜನೆ (Kalasa Banduri Project) ಮೂಲಕ ನಮ್ಮ ಪಾಲಿನ ನೀರನ್ನು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ. ಈ ವಿಚಾರವಾಗಿ ನಾವೆಲ್ಲರೂ ಒಟ್ಟಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಕೋನರೆಡ್ಡಿ ಅವರು ಮಹದಾಯಿ ಯೋಜನೆ ವಿಚಾರವಾಗಿ ಗೋವಾ ಸಿಎಂ ಅಲ್ಲಿನ ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಇಡೀ ರಾಜ್ಯದ ಜನ ಪಕ್ಷಬೇಧ ಮರೆತು ಈ ವಿಚಾರವಾಗಿ ಹೋರಾಟ ಮಾಡಿದ್ದಾರೆ. ನ್ಯಾಯಾಲಯದಲ್ಲಿ ಇದರ ತೀರ್ಪು ಬಂದಿದ್ದು, ನಮ್ಮ ರಾಜ್ಯಕ್ಕೆ ಅಗತ್ಯ ಪಾಲಿನ ನೀರು ಹಂಚಿಕೆ ಮಾಡಲಾಗಿದೆ. 2022ರಲ್ಲಿ ಕೇಂದ್ರ ಜಲ ಆಯೋಗ ಕೂಡ ಈ ನೀರನ್ನು ಬಳಸಿಕೊಳ್ಳಲು ಅನುಮತಿ ನೀಡಿತು. ಹುಬ್ಬಳ್ಳಿ ಧಾರವಾಡದಲ್ಲಿ ಶಾಸಕರುಗಳು ಸೇರಿ ವಿಜಯೋತ್ಸವವನ್ನು ಆಚರಿಸಿದರು ಎಂದರು. ಇದನ್ನೂ ಓದಿ: ಕೇಂದ್ರದಿಂದ `ಆನ್‌ಲೈನ್ ಗೇಮಿಂಗ್ ತಡೆ’ ಮಸೂದೆಗೆ ಅನುಮೋದನೆ

ಈ ಮಧ್ಯೆ ಗೋವಾದ ಅಧಿಕಾರಿ ಈ ಯೋಜನೆ ಪ್ರಶ್ನಿಸಿ ನಮ್ಮ ಸರ್ಕಾರಕ್ಕೆ ಶೋಕಾಸ್ ನೋಟೀಸ್ ನೀಡಿದ್ದಾರೆ. ಅವರು ನಮ್ಮ ರಾಜ್ಯಕ್ಕೆ ಹೇಗೆ ನೋಟೀಸ್ ನೀಡಲು ಸಾಧ್ಯ? ಕೆಲವು ವಿಚಾರದಲ್ಲಿ ಕೇಂದ್ರ ಸರ್ಕಾರ ನಮಗೆ ನೋಟೀಸ್ ನೀಡಬಹುದು. ನಮ್ಮ ರಾಜ್ಯದ ಅಧಿಕಾರಿ ಬೇರೆ ರಾಜ್ಯಕ್ಕೆ ನೋಟೀಸ್ ನೀಡಲು ಸಾಧ್ಯವೇ? ನಾವು ಆ ನೋಟೀಸ್ ಗೆ ಹೆಚ್ಚು ಮಾನ್ಯತೆ ನೀಡದೇ ಯೋಜನೆ ಮುಂದುವರಿಸಬೇಕಿತ್ತು. ಆದರೆ ಆಗ ನಮ್ಮ ರಾಜ್ಯದವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅಂದು ನಾನು ಅಧಿಕಾರದಲ್ಲಿ ಇದ್ದಿದ್ದರೆ, ಆ ನೋಟೀಸ್ ಕೊಡಲು ನೀನು ಯಾರು ಎಂದು ಪ್ರಶ್ನೆ ಮಾಡುತ್ತಿದ್ದೆ ಎಂದು ಹೇಳಿದರು. ಇದನ್ನೂ ಓದಿ: 12 ಗಂಟೆ ಟ್ರಾಫಿಕ್‌ನಲ್ಲೇ ಕಳೆಯೋದಾದ್ರೆ ಜನ ಟೋಲ್ ಯಾಕೆ ಪಾವತಿಸ್ಬೇಕು? – NHAI ವಿರುದ್ಧ ಸುಪ್ರೀಂ ಗರಂ

ನಾನು ನಾಲ್ಕು ಬಾರಿ ಕೇಂದ್ರ ಜಲ ಶಕ್ತಿ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ್ದು, ಈ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಅವರಿಗೆ ಯಾವ ರಾಜಕೀಯ ಒತ್ತಡ ಇದೆಯೋ ಗೊತ್ತಿಲ್ಲ. ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಮೂರು ಬಾರಿ ಭೇಟಿ ಮಾಡಿ ಮನವಿ ಮಾಡಿದ್ದಾರೆ. ಈ ತಿಂಗಳು ಮತ್ತೆ ದೆಹಲಿಗೆ ಬಂದು ಭೇಟಿ ಮಾಡುವಂತೆ ದಿನಾಂಕ ನೀಡಿದ್ದಾರೆ. ಕಳಸಾ ಬಂಡೂರಿ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಮೀಸಲಾಗಿರುವ ಪ್ರತಿಯೊಂದು ಹನಿ ನೀರನ್ನು ಬಳಸಲು ಎಲ್ಲಾ ಹಕ್ಕು ಇದೆ. ನಾನು ಇಲಾಖೆ ಅಧಿಕಾರ ವಹಿಸಿಕೊಂಡ ಬಳಿಕ ಟೆಂಡರ್ ಕರೆದು ಗುತ್ತಿಗೆಯನ್ನು ಅಂತಿಮಗೊಳಿಸಿದ್ದೇನೆ. ಕಾನೂನು ವಿಚಾರಗಳನ್ನು ಸ್ವಲ್ಪ ಅಧ್ಯಯನ ಮಾಡುತ್ತಿದ್ದು, ಈ ವಿಚಾರದಲ್ಲಿ ಕಾನೂನು ತೊಡಕು ಇದ್ದರೆ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಹಿಂಪಡೆದು ನಾವು ಯೋಜನೆ ಆರಂಭಿಸಬಹುದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಚಾರವಾಗಿ ಅಡ್ವೊಕೇಟ್ ಜನರಲ್ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ವಿವರಿಸಿದರು. ಇದನ್ನೂ ಓದಿ: ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಷರತ್ತು ಬದ್ಧ ಅನುಮತಿ

ಇದು ನಮ್ಮ ರಾಜ್ಯದ ಹಿತದ ವಿಚಾರ. ಇದು ಅನಗತ್ಯವಾಗಿ ವಿಳಂಬವಾದರೆ ನೀರು ಸುಮ್ಮನೆ ಹರಿದು ಹೋಗುತ್ತಿರುತ್ತದೆ. ನಾವೆಲ್ಲರೂ ಈ ವಿಚಾರದಲ್ಲಿ ಒಗ್ಗಟ್ಟಿನ ಹೋರಾಟ ಮಾಡಬೇಕು. ನಾನು ದಿನಾಂಕ ನಿಗದಿ ಮಾಡುತ್ತೇನೆ. ಎಲ್ಲರೂ ಹೋಗಿ ಈ ಯೋಜನೆ ಜಾರಿಗೆ ಆಗ್ರಹ ಮಾಡೋಣ. ನಾನು ಈ ವಿಚಾರವಾಗಿ ಪ್ರಧಾನಮಂತ್ರಿಗಳ ಮುಂದೆಯೂ ಪ್ರಸ್ತಾಪ ಮಾಡಿದ್ದೇನೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ನೀವು ಒತ್ತಡ ಹಾಕಿ. ಈ ಯೋಜನೆ ಜಾರಿಯಾದರೆ ಕೇವಲ ಒಂದೇ ವರ್ಷದಲ್ಲಿ ಫಲಿತಾಂಶ ಕಾಣಲಿದೆ ಎಂದು ತಿಳಿಸಿದರು. ಇದನ್ನೂ ಓದಿ: 97 LCA ಮಾರ್ಕ್ 1A ಫೈಟರ್ ಜೆಟ್‌ ಖರೀದಿಗೆ 62,000 ಕೋಟಿ ರೂ. ಒಪ್ಪಂದಕ್ಕೆ ಭಾರತ ಅನುಮೋದನೆ

TAGGED:bengalurucongressDK ShivakumarKalasa banduri projectಕಳಸಾ ಬಂಡೂರಿ ಯೋಜನೆಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Akshay Kumar Rani Mukerji
ʻOh My God 3ʼ ಸಿನಿಮಾಗಾಗಿ ಒಂದಾದ ರಾಣಿ ಮುಖರ್ಜಿ – ಅಕ್ಷಯ್‌ ಕುಮಾರ್
Bollywood Cinema Latest
Ashwini Gowda and Gilli Nata Talk Fight
ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories
vijayalakshmi 1 1
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್
Cinema Karnataka Latest Sandalwood Top Stories

You Might Also Like

Crime 1
Crime

ಉತ್ತರ ಪ್ರದೇಶ | ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಹತ್ಯೆ – ಯುವತಿ ಅರೆಸ್ಟ್‌

Public TV
By Public TV
17 minutes ago
Bengaluru Kogilu Layout Demolition
Bengaluru City

ಅಕ್ರಮ ಒತ್ತುವರಿದಾರರ ಸುಳ್ಳಿನ ಕಂತೆ – 2021ರಲ್ಲಿ ಇಲ್ಲದ ಮನೆಗಳು 2023ರಲ್ಲಿ ಪ್ರತ್ಯಕ್ಷ!

Public TV
By Public TV
24 minutes ago
Kogilu Layout Demolition
Bengaluru City

ಮುಂಗಡ ಹಣ ಪಾವತಿಸಿದವರಿಗೆ ಇಲ್ಲ, ಅಕ್ರಮ ಜಾಗದಲ್ಲಿ ನೆಲೆಸಿದವರಿಗೆ ಫಟಾಫಟ್‌ ಮನೆ!

Public TV
By Public TV
49 minutes ago
Visuals Of Satish Reddy Gunman Firing Towards Janardhan Reddy House In Ballari
Bellary

ಜನಾರ್ದನ ರೆಡ್ಡಿ ನಿವಾಸದ ಕಡೆ ಗುಂಡಿನ ದಾಳಿ ನಡೆಸಿದ ಸತೀಶ್ ರೆಡ್ಡಿ ಗನ್ ಮ್ಯಾನ್‌ – ಕ್ಯಾಮೆರಾದಲ್ಲಿ ದೃಶ್ಯ ಸೆರೆ

Public TV
By Public TV
1 hour ago
EVM
Bengaluru City

EVM ನಿಖರ ಫಲಿತಾಂಶ ಕೊಡುತ್ತೆ – ಕಾಂಗ್ರೆಸ್‌ಗೆ ಭಾರೀ ಮುಜುಗರ ತರಿಸುವ ಸಮೀಕ್ಷೆ ರಾಜ್ಯದಿಂದಲೇ ಪ್ರಕಟ

Public TV
By Public TV
2 hours ago
Resort
Crime

ರೆಸಾರ್ಟ್​​ ಮಾಲೀಕರ ಕಾರು ಚಾಲಕನ ಮೇಲೆ ಹಲ್ಲೆ – ಮೊಬೈಲ್, ಹಣ ದೋಚಿ‌ದ ಕಿಡಿಗೇಡಿಗಳು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?