Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Search

Archives

  • August 2026
  • July 2026
  • June 2026
  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
  • ಟ್ರೆಂಡಿಂಗ್ ನ್ಯೂಸ್ ( Trending News )
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.
Reading: ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಡಿ.ಕೆ. ಶಿವಕುಮಾರ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.

Home | Districts | Bengaluru City | ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಡಿ.ಕೆ. ಶಿವಕುಮಾರ್

Bengaluru City

ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಡಿ.ಕೆ. ಶಿವಕುಮಾರ್

Last updated: August 24, 2026 10:54 pm
By
Public TV
Share
7 Min Read
DK Shivakumar 3 2

– ಬರ ಪರಿಸ್ಥಿತಿ ಚರ್ಚೆ ಬದಲು ರಾಜಕೀಯಕ್ಕೆ ವಿಪಕ್ಷಗಳ ಆದ್ಯತೆ: ಸಿಎಂ ಅಸಮಾಧಾನ
– ವಿರೋಧ ಪಕ್ಷಗಳಿಂದ ರಾಜ್ಯದ ಜನತೆಗೆ ದ್ರೋಹ

ಬೆಂಗಳೂರು: ರಾಜಕಾರಣಕ್ಕಿಂತ ರಾಜ್ಯದ ಹಿತ ಮತ್ತು ಜನರ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಮನವಿ ಮಾಡಿದರು.

ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿದ ಅವರು, ಸರ್ಕಾರ ರಚನೆಯಾದ ಬಳಿಕ ನಡೆದ ಮೊದಲ ಅಧಿವೇಶನದಲ್ಲೇ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಎಲ್ಲ ಸದಸ್ಯರಿಗೆ ಮುಕ್ತ ಮನಸ್ಸಿನಿಂದ ಕೆಲಸ ಮಾಡುವಂತೆ ಮನವಿ ಮಾಡಿದ್ದೆ. ನನಗೆ ಯಾವುದೇ ಸಂಕೋಚ ಅಥವಾ ದ್ವೇಷವಿಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡೋಣ. ಚುನಾವಣೆ ಬಂದಾಗ ಚುನಾವಣೆ ಮಾಡೋಣ, ಆದರೆ ಸದನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸೋಣ ಎಂದು ಹೇಳಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದೆ. ಈ ಕುರಿತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಸಮಗ್ರ ವರದಿ ನೀಡಿದ್ದಾರೆ. ಬೆಳಗಾವಿ, ಕಲಬುರಗಿ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಲಾಗಿದೆ. ಸಚಿವರಿಗೂ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಿ ವರದಿ ನೀಡುವಂತೆ ಸೂಚಿಸಲಾಗಿದೆ. ಅದರ ಆಧಾರದ ಮೇಲೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 1 ಕೋಟಿ ರೂ. ನೀಡಲಾಗಿದೆ. ಜಿಲ್ಲಾಧಿಕಾರಿಗಳಿಗೂ ಅಗತ್ಯ ಹಣಕಾಸು ಒದಗಿಸಲಾಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಬರದ ಬಗ್ಗೆ ಚರ್ಚೆ ನಡೆಸುವ ಬದಲು ವಿರೋಧ ಪಕ್ಷ ರಾಜಕೀಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

More Read

Anaya banger
ಲಿಂಗ ಬದಲಾಯಿಸಿಕೊಂಡಿದ್ದ ಅನಯಾಗೆ ಆಸ್ಟ್ರೇಲಿಯಾದಲ್ಲಿ ಮಹಿಳಾ ಕ್ರಿಕೆಟ್ ಆಡಲು ಗ್ರೀನ್ ಸಿಗ್ನಲ್
G.T. Deve Gowda elected as the President of Karnataka Cooperative Federation
ಕರ್ನಾಟಕ ಸಹಕಾರ ಮಹಾ ಮಂಡಲದ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಆಯ್ಕೆ
DK Shivakumar 1 2
SIR ಆಕ್ಷೇಪಣೆ ಅವಧಿ ವಿಸ್ತರಣೆಗೆ ಡಿಕೆ ಮನವಿ – ಕೇಂದ್ರ ಚುನಾವಣಾ ಆಯೋಗಕ್ಕೆ 2 ಪುಟಗಳ ಪತ್ರ

ನಾಗೇಂದ್ರ ರಾಜೀನಾಮೆ ವಿಚಾರ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕೇಳುವುದರಲ್ಲಿ ತಪ್ಪಿಲ್ಲ. ಆದರೆ ಈ ವಿಚಾರದಲ್ಲಿ ನೋಟಿಸ್ ನೀಡಿ ಚರ್ಚೆ ನಡೆಸಬೇಕು. ತನಿಖೆ ನಡೆದಿದ್ದು, ವರದಿಯೂ ಬಂದಿದೆ. ಹಣವನ್ನು ವಾಪಸ್ ಪಡೆಯುವ ಪ್ರಕ್ರಿಯೆಯೂ ನಡೆದಿದೆ. ಈ ಎಲ್ಲ ವಿವರಗಳನ್ನು ಸದನದಲ್ಲಿ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಸಿಬಿಐ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳು ಈ ಪ್ರಕರಣದ ತನಿಖೆ ನಡೆಸಿವೆ. ಇದುವರೆಗೆ ನಾಗೇಂದ್ರ ಅವರು ನೇರವಾಗಿ ತಪ್ಪಿತಸ್ಥರು ಎಂದು ತೋರಿಸುವ ದಾಖಲೆಗಳು ಬಂದಿಲ್ಲ. ಹೀಗಾಗಿ ಚರ್ಚೆ ನಡೆಸದೆ ಸದನದ ಕಲಾಪಕ್ಕೆ ಅಡ್ಡಿಪಡಿಸುವುದು ಸೂಕ್ತವಲ್ಲ ಎಂದರು.

ಕೆಪಿಎಸ್‌ಸಿ ನೇಮಕಾತಿ ಅಕ್ರಮದ ತನಿಖೆ
ಕೆಪಿಎಸ್‌ಸಿ ವಿಚಾರದಲ್ಲಿಯೂ ತನಿಖೆ ನಡೆಯುತ್ತಿದೆ. ಹಿಂದಿನ ಅವಧಿಯಲ್ಲಿ ನಡೆದ ನೇಮಕಾತಿ ಹಾಗೂ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಜಾರಿ ನಿರ್ದೇಶನಾಲಯವೂ ತನಿಖೆಗೆ ಪ್ರವೇಶಿಸಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಂಪುಟದಿಂದಲೂ ಅಗತ್ಯ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಯುವಕರ ಭವಿಷ್ಯದ ಬಗ್ಗೆ ಚರ್ಚೆಯಾಗಲಿ
ದೇಶದ ಯುವಕರು ಮತ್ತು ವಿದ್ಯಾರ್ಥಿಗಳು ರಾಷ್ಟ್ರದ ಆಸ್ತಿ. ಅವರಿಗೆ ನ್ಯಾಯ ಒದಗಿಸುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಸಿಎಂ, ಯುವಕರ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯಬೇಕಿತ್ತು ಎಂದರು.

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಆದರೆ ಯುವಕರ ಸಮಸ್ಯೆಗಳನ್ನು ಚರ್ಚಿಸುವ ಬದಲು ರಾಜಕಾರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಆಕ್ಷೇಪಿಸಿದರು.

ದೇಶದಾದ್ಯಂತ ಯುವಕರು ಉದ್ಯೋಗದ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿರುವ ಯುವಕರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ವಿಷಾದನೀಯ. ಇಂತಹ ಘಟನೆಗಳು ಯುವ ಸಮುದಾಯಕ್ಕೆ ಯಾವ ಸಂದೇಶ ನೀಡುತ್ತವೆ ಎಂಬುದನ್ನು ಸರ್ಕಾರಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಕರ್ನಾಟಕ ಸರ್ಕಾರ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ ಎಂದು ತಿಳಿಸಿದರು.
ನಾವು ಹೊಸ ಯುಗಕ್ಕೆ ಕಾಲಿಟ್ಟಿದ್ದೇವೆ. ಇಂದಿನ ಯುವಕರು ವಿದ್ಯಾವಂತರು, ಬುದ್ಧಿವಂತರು ಹಾಗೂ ಪ್ರಜ್ಞಾವಂತರು. ಅವರ ಭವಿಷ್ಯದ ಬಗ್ಗೆ ಚಿಂತಿಸುವುದು ಸರ್ಕಾರಗಳ ಆದ್ಯತೆಯಾಗಬೇಕು. ಆದರೆ ಯುವಕರ ಭವಿಷ್ಯದ ಕುರಿತು ಚರ್ಚಿಸುವುದನ್ನು ಬಿಟ್ಟು ರಾಜಕೀಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವುದು ಬೇಸರದ ಸಂಗತಿ ಎಂದು ಹೇಳಿದರು.

ಕಾವೇರಿ, ರೈತರ ಹಿತಕ್ಕೆ ಸರ್ಕಾರ ಬದ್ಧ
ಕಾವೇರಿ ನೀರು, ಬರಗಾಲ, ರೈತರ ಭೂಸ್ವಾಧೀನ, ಕೇಂದ್ರದ ನೀರಾವರಿ ಅನುದಾನ ಹಾಗೂ ಮತದಾರರ ಹಕ್ಕು ಸೇರಿದಂತೆ ರಾಜ್ಯದ ಪ್ರಮುಖ ವಿಚಾರಗಳಲ್ಲಿ ಸರ್ಕಾರ ರಾಜ್ಯದ ಹಿತ ಕಾಪಾಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ವಿಧಾನಸಭೆಯಲ್ಲಿ ಇಂತಹ ವಿಷಯಗಳ ಕುರಿತು ಅರ್ಥಪೂರ್ಣ ಚರ್ಚೆ ನಡೆಯಬೇಕು. ರಾಜಕೀಯ ಆರೋಪ-ಪ್ರತ್ಯಾರೋಪಗಳಿಗಿಂತ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಮುಖ್ಯ ಎಂದರು.

ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶಗಳು ಹಾಗೂ ನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯದ ಹಿತ ಕಾಪಾಡಲು ಎಲ್ಲ ಪಕ್ಷಗಳ ಸಹಕಾರ ಅಗತ್ಯವಾಗಿದೆ. ಮಳೆ ಕೊರತೆ ಮತ್ತು ಬರದ ಪರಿಸ್ಥಿತಿಯಿಂದ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಅವರಿಗೆ ನೆರವು ನೀಡಲು ಸರ್ಕಾರ ಈಗಾಗಲೇ ಅಣೆಕಟ್ಟುಗಳಿಗೆ ತೆರಳಿ ಸಭೆ ನಡೆಸಿದೆ. ರೈತರನ್ನು ಉಳಿಸಲು ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ವಿರೋಧ ಪಕ್ಷಗಳು ಸಲಹೆ ನೀಡಬೇಕು ಎಂದು ಮನವಿ ಮಾಡಿದರು.

ಇತ್ತೀಚೆಗೆ ಚೆನ್ನೈನಲ್ಲಿ ಕೇಂದ್ರ ಗೃಹ ಸಚಿವರು ಕರೆದಿದ್ದ ಸಭೆಯಲ್ಲಿ ರಾಜ್ಯದ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದೇನೆ. ಮೇಕೆದಾಟು ಯೋಜನೆಯ ನೀರನ್ನು ಬೆಂಗಳೂರು ಕುಡಿಯುವ ನೀರಿನ ಅಗತ್ಯ ಸೇರಿದಂತೆ ರಾಜ್ಯದ ಹಿತಕ್ಕಾಗಿ ಬಳಸಬೇಕು ಎಂಬ ನಿಲುವನ್ನು ತಮಿಳುನಾಡಿನಲ್ಲಿಯೇ ಸ್ಪಷ್ಟವಾಗಿ ಪ್ರತಿಪಾದಿಸಿದ್ದೇನೆ ಎಂದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳನ್ನು ಕೇಂದ್ರದ ಮುಂದೆ ಪ್ರಸ್ತಾಪಿಸುವುದು ತಮ್ಮ ಕರ್ತವ್ಯ. ನೀರಾವರಿ ಅಭಿವೃದ್ಧಿ ಮತ್ತು ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆಯೂ ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿಗಳ ಮುಂದೆ ಹಲವು ಬಾರಿ ಪ್ರಸ್ತಾಪಿಸಲಾಗಿದೆ ಎಂದು ಹೇಳಿದರು.

5,300 ಕೋಟಿ, 600 ಕೋಟಿ ರೂ. ಅನುದಾನ: ಒಂದು ರೂಪಾಯಿಯೂ ಬಂದಿಲ್ಲ
ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ 5,300 ಕೋಟಿ ರೂ. ಮತ್ತು 600 ಕೋಟಿ ರೂ. ಅನುದಾನ ನೀಡಲಾಗಿದ್ದರೂ, ಇದುವರೆಗೆ ಒಂದು ರೂಪಾಯಿಯೂ ಬಿಡುಗಡೆಯಾಗಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಪಾಲಿನ ಹಣ ಹಾಗೂ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಸಿಗಬೇಕು. ಈ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಆದರೆ ವಿರೋಧ ಪಕ್ಷಗಳು ಈ ಬಗ್ಗೆ ಮಾತನಾಡದೆ ರಾಜ್ಯದ ಜನತೆಗೆ ದ್ರೋಹ ಎಸಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರ ಪರಿಸ್ಥಿತಿಯನ್ನು ಎದುರಿಸಲು ಮೋಡ ಬಿತ್ತನೆ ಮಾಡುವ ಕುರಿತು ಹಲವು ಶಾಸಕರು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಸರ್ಕಾರ ಗಂಭೀರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು. ಇದನ್ನೂ ಓದಿ: ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ – ಡಿಕೆಶಿ ಘೋಷಣೆ

ಭೂಸ್ವಾಧೀನಕ್ಕೆ ರೈತರಿಗೆ 2.5 ಕೋಟಿಯಿಂದ 3 ಕೋಟಿ ರೂ. ಪರಿಹಾರ
ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಭೂಸ್ವಾಧೀನ ವಿಚಾರದಲ್ಲೂ ಮುಖ್ಯಮಂತ್ರಿ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಸುತ್ತಮುತ್ತ 9,000 ಎಕರೆ ಭೂಮಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲೇ ಹಲವು ಭೂಸ್ವಾಧೀನ ಪ್ರಕ್ರಿಯೆಗಳು ನಡೆದಿವೆ ಎಂದರು.

ಈ ಕುರಿತು ವಿಧಾನಸಭೆಯಲ್ಲಿ ಮುಕ್ತ ಚರ್ಚೆಗೆ ತಾವು ಸಿದ್ಧರಿದ್ದು, ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳನ್ನು ಕರೆಸಿ ಚರ್ಚಿಸಲು ಸಿದ್ಧವಿದ್ದೇನೆ ಎಂದು ಹೇಳಿದರು.

ರೈತರ ಭೂಮಿಗೆ ಹಿಂದೆ 25 ಲಕ್ಷ ರೂ. ಮತ್ತು 40 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ಆದರೆ ರೈತರ ಹಿತದೃಷ್ಟಿಯಿಂದ ಇದೀಗ 2.5 ಕೋಟಿಯಿಂದ 3 ಕೋಟಿ ರೂ.ವರೆಗೆ ಪರಿಹಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಯಾವುದೇ ರೈತನ ಜಮೀನನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಸಿದ್ಧವಿಲ್ಲ. ದೇಶದ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನೆರವು ನೀಡುವ ನೀತಿ ಅಗತ್ಯ. ಹಿಂದಿನ ಯುಪಿಎ ಸರ್ಕಾರ ಭೂಮಿ ಕಳೆದುಕೊಂಡವರಿಗೆ ಪರಿಹಾರ ಹೆಚ್ಚಿಸುವ ಐತಿಹಾಸಿಕ ನಿರ್ಧಾರಗಳನ್ನು ಕೈಗೊಂಡಿತ್ತು. ಅದೇ ಮಾದರಿಯಲ್ಲಿ ರೈತರ ಪರವಾಗಿ ಸರ್ಕಾರ ನಿಲ್ಲಲಿದೆ ಎಂದು ಹೇಳಿದರು. ಇದನ್ನೂ ಓದಿ: ಐಪಿಸಿ ಕಂಪನಿಯಿಂದ 83 ಸಾವಿರ ಕೋಟಿ ರೂ. ಹೂಡಿಕೆಗೆ ಒಲವು: ಎಂ.ಬಿ ಪಾಟೀಲ್

ಎಸ್‌ಐಆರ್ ಕುರಿತು ಸರ್ಕಾರದಿಂದ ಜಾಗೃತಿ
ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಎಸ್‌ಐಆರ್ ವಿಚಾರವನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ-ಪಂಗಡಗಳು ಹಾಗೂ ಶಿಕ್ಷಣದ ಅವಕಾಶ ಕಡಿಮೆ ಇರುವವರ ಮತದಾನದ ಹಕ್ಕಿಗೆ ಧಕ್ಕೆಯಾಗಬಾರದು ಎಂದರು.

ಯಾವುದೇ ಪಕ್ಷದವರಾಗಿದ್ದರೂ ಭವಿಷ್ಯದಲ್ಲಿ ಅರ್ಹ ಮತದಾರರಿಗೆ ತೊಂದರೆಯಾಗದಂತೆ ಎಸ್‌ಐಆರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಮುಂದಾಗಿದೆ. ಮತದಾನದ ಹಕ್ಕನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಈ ವಿಚಾರದಲ್ಲಿ ಎಲ್ಲ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದರು.

ರಾಜಕಾರಣಕ್ಕಿಂತ ಜನರ ಹಿತ ಮುಖ್ಯ
ರಾಜಕಾರಣ ಮುಖ್ಯವಲ್ಲ; ಜನರ ಕಲ್ಯಾಣ ಮುಖ್ಯ. ರೈತರ ಸಮಸ್ಯೆ ಮುಖ್ಯ. ಯುವಕರ ಭವಿಷ್ಯ ಮುಖ್ಯ. ರಾಜ್ಯದ ನೆಲ, ಜಲ ಮತ್ತು ಭಾಷೆ ಮುಖ್ಯ ಎಂದು ಮುಖ್ಯಮಂತ್ರಿ ಹೇಳಿದರು.

ವಿಧಾನಸಭೆಯ ಅಮೂಲ್ಯ ದಿನಗಳನ್ನು ಜನರ ಸಮಸ್ಯೆಗಳ ಚರ್ಚೆಗೆ ಬಳಸುವ ಬದಲು ರಾಜಕೀಯ ಗದ್ದಲಕ್ಕೆ ಬಳಸಲಾಗುತ್ತಿದೆ. ಇದಕ್ಕೆ ನಾಡಿನ ಜನತೆ ವಿರೋಧ ಪಕ್ಷಗಳನ್ನು ಕ್ಷಮಿಸುವುದಿಲ್ಲ ಎಂದು ಬಿಜೆಪಿ ಹಾಗೂ ಎನ್‌ಡಿಎ ವಿರುದ್ಧ ವಾಗ್ದಾಳಿ ನಡೆಸಿದರು. ಸಭೆಯಲ್ಲಿ ರೈತರು, ಯುವಕರು ಹಾಗೂ ರಾಜ್ಯದ ಅಭಿವೃದ್ಧಿ ಕುರಿತು ಸಮಗ್ರ ಚರ್ಚೆ ನಡೆಯಬೇಕಿತ್ತು ಎಂದು ಹೇಳಿದರು.

ಕಾಂಗ್ರೆಸ್ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ
ಬಿಜೆಪಿ ಮತ್ತು ಎನ್‌ಡಿಎಗೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

ವಿರೋಧ ಪಕ್ಷಗಳಿಗೆ ರಾಜ್ಯದ ಹಿತದ ಬಗ್ಗೆ ಚಿಂತನೆ ಇಲ್ಲ. ಜನರು ಅದಕ್ಕಾಗಿಯೇ ನಿಮ್ಮನ್ನು ವಿರೋಧ ಪಕ್ಷದಲ್ಲಿ ಇಟ್ಟಿದ್ದಾರೆ ಎಂದು ಮುಖ್ಯಮಂತ್ರಿ ತರಾಟೆಗೆ ತೆಗೆದುಕೊಂಡರು.

ರಾಜ್ಯದ ಜನರ ಹಿತ, ರೈತರ ಬದುಕು, ಯುವಕರ ಭವಿಷ್ಯ ಹಾಗೂ ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Share This Article
Facebook Whatsapp Whatsapp Telegram Copy Link
Cinema News
Rhiya Ahir
ನೀಟ್‌ ಪ್ರತಿಭಟನೆ ವೇಳೆ ಪೊಲೀಸ್‌ ವ್ಯಾನ್‌ ತಡೆದಿದ್ದ ರಿಯಾ ಅಹೀರ್ ಬಿಗ್‌ಬಾಸ್‌ ಮನೆ ಆಫರ್‌; ಫ್ಯಾನ್ಸ್‌ ಕೈಯಲ್ಲಿ ನಿರ್ಧಾರ!
Rashmika Mandanna Viral look
ಕಾಸ್ಟ್ಲಿ ‘ಅನಾರ್ಕಲಿ’ಯಲ್ಲಿ ಮಿಂಚಿದ ರಶ್ಮಿಕಾ – ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!
Darshan Chikkanna
ದರ್ಶನ್ ಅವ್ರನ್ನ ಮದುವೆಗೆ ಕರೆದ್ರೂ ಬರುವಂತಿಲ್ಲ: ಚಿಕ್ಕಣ್ಣ
cinema
ಅಂಥೋಣಿ ದಾಸ್ ಕಂಠದಲ್ಲಿ ಪ್ರೀತಿ ತುಂಬಿದ ‘ಸಿಟಿ ಲೈಟ್ಸ್’ ಸಾಂಗ್

You Might Also Like

gadag 1

ಗದಗ ಜಿಲ್ಲೆಯಲ್ಲಿ ‘ಭಾರತ ಜೋಡೋ ಯುವ ಸಂಘ’ ಸ್ಥಾಪನೆಗೆ ಒತ್ತು: ಜಿಲ್ಲಾಧಿಕಾರಿ

2 hours ago
Gadag

ಕ್ರಿಮಿನಾಶಕ ಸಿಂಪಡಿಸಿದ ಮೆಕ್ಕೆಜೋಳ ಸೇವಿಸಿ ಹತ್ತಾರು ಜಾನುವಾರು ಸಾವು

2 hours ago
Govinda Karajola

ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಗೋವಿಂದ ಕಾರಜೋಳ

2 hours ago
Bihar student protest

ಪಾಟ್ನಾದಲ್ಲಿ ತಾರಕಕ್ಕೇರಿದ ವಿದ್ಯಾರ್ಥಿಗಳ ಪ್ರತಿಭಟನೆ; ಜಲಫಿರಂಗಿ ಪ್ರಯೋಗ, ಬ್ಯಾರಿಕೇಡ್ ಮುರಿದು ಮೆರವಣಿಗೆ

3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
© Public TV. Design Company Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact