ಬೀದರ್: ಐತಿಹಾಸಿಕ ಶಿವನ ಹಾಗೂ ಗಣೇಶನ ಮೂರ್ತಿಗಳನ್ನು ಕೆಲ ಕಿಡಿಗೇಡಿಗಳು ವಿರೂಪಗೊಳಿಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪೂರ್ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಗ್ರಾಮದಲ್ಲಿರುವ ಚಾಳಕಾದೇವಿ ಬೆಟ್ಟದಲ್ಲಿರುವ ಶಿವನ ಮೂರ್ತಿಯ ಜೊತೆಗೆ ಗಣೇಶನ ಮೂರ್ತಿಯನ್ನೂ ವಿರೂಪಗೊಳಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಶ್ರೀ ಮಹಾನ್ ಸಿದ್ಧಿ ಪುರುಷ ಸಿದ್ದಾರೂಢರ ಜನ್ಮ ಸ್ಥಳದಲ್ಲಿ ಈ ಘಟನೆ ನಡೆದಿದೆ. ಶಿವನ ಹಾಗೂ ಗಣೇಶನ ಮೂರ್ತಿಗಳು ವಿರೂಪಗೊಳಿಸಿದ್ದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶಗೊಂಡಿದ್ದಾರೆ. ಇದನ್ನೂ ಓದಿ: ಶಿಕ್ಷಕರ ಒತ್ತಾಯಕ್ಕೆ 100 ಬಸ್ಕಿ ಹೊಡೆದ 7 ಮಂದಿ ವಿದ್ಯಾರ್ಥಿನಿಯರು – ಆಸ್ಪತ್ರೆಗೆ ದಾಖಲು
Advertisement
Advertisement
ಐತಿಹಾಸಿಕ ಮೂರ್ತಿಗಳನ್ನು ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಈ ಕೂಡಲೇ ಬಂಧಿಸಬೇಕು ಎಂದು ಗ್ರಾಮಸ್ಥರು ಪೊಲೀಸರಿಗೆ ಒತ್ತಾಯ ಮಾಡಿದ್ದಾರೆ. ಖಟಕ್ ಚಿಂಚೋಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಖಟಕ್ ಚಿಂಚೋಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ನೂತನ ಪ್ರಧಾನಿಗೆ ಮೋದಿ ಅಭಿನಂದನೆ