ನಾಗಚೈತನ್ಯ ಮತ್ತು ಸಾಯಿಪಲ್ಲವಿ ಜೋಡಿಯ ಹೊಸ ಸಿನಿಮಾದ ಕಥೆ ಬಹಿರಂಗ

Public TV
1 Min Read
Sai Pallavi 1 1

ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ (Naga Chaitanya) 23ನೇ ಸಿನಿಮಾಗೆ ನಾಯಕಿಯಾಗಿ ಸಾಯಿಪಲ್ಲವಿ (Sai Pallavi) ಆಯ್ಕೆಯಾಗಿದ್ದಾರೆ. ಲವ್ ಸ್ಟೋರಿ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮತ್ತೆ ಒಂದಾಗುತ್ತಿರುವುದು ನಿರೀಕ್ಷೆ ಹೆಚ್ಚಿಸಿದೆ. ಕಾರ್ತಿಕೇಯ-2 ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ (Chandu Mondeti) ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಸದ್ಯ  NC23 ಎಂಬ ತಾತ್ಕಾಲಿಕ ಟೈಟಲ್ ಇಡಲಾಗಿದೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ (Allu Arvind) ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ.

Sai Pallavi 2 1

ಮೀನುಗಾರರ ಸಮುದಾಯದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಇದಾಗಿದೆ. ಇತ್ತೀಚೆಗೆ ನಾಯಕ ಚೈತನ್ಯ ಹಾಗೂ ನಿರ್ದೇಶಕ ಚಂದು ಮೊಂಡೇಟಿ ಆಂಧ್ರಪ್ರದೇಶದ ಶ್ರೀಕಾಕುಳಂಗೆ ಭೇಟಿ ನೀಡಿ, ಮೀನುಗಾರರ ಕುಟುಂಬಗಳ ಜೊತೆ ಕಾಲಕಳೆದಿದ್ದರು. ಮೀನುಗಾರರ ಸಂಸ್ಕೃತಿ, ನೆಲ, ಭಾಷೆ, ಜೀವನಶೈಲಿಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು. ಸದ್ಯ NC23 ಸಿನಿಮಾ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ.

ಲವ್ ಸ್ಟೋರಿ ಸಿನಿಮಾದಲ್ಲಿ ಸಾಯಿಪಲ್ಲವಿ ಹಾಗೂ ನಾಗಚೈತನ್ಯ ಜೋಡಿಯ ಕೆಮಿಸ್ಟ್ರೀ ಸಖತ್ ವರ್ಕೌಟ್ ಆಗಿತ್ತು. ತೆರೆಮೇಲೆ ಮ್ಯಾಜಿಕ್ ಮಾಡಿದ್ದ ಚೈ ಮತ್ತು ಮಲರ್ ಬ್ಯೂಟಿ ಮತ್ತೊಮ್ಮೆ ಕೈ ಜೋಡಿಸಿರುವುದು ಅಭಿಮಾನಿಗಳಿಗೆ ಖುಷಿಕೊಟ್ಟಿದೆ. ಬಹಳ ಅದ್ಧೂರಿಯಾಗಿ ನಿರ್ಮಾಣವಾಗ್ತಿರುವ ಈ ಸಿನಿಮಾದ ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಶೀಘ್ರದಲ್ಲಿಯೇ ಅಪ್ ಡೇಟ್ ನೀಡಲಿದೆ ಚಿತ್ರತಂಡ.

Web Stories

Share This Article