ನಾಳೆಯಿಂದ ಬೆಂಗಳೂರಿನಲ್ಲಿ (Bangalore) ನಡೆಯಲಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Chirotsava) ಆರ್.ಆರ್.ಆರ್ (RRR) ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳಿಗೆ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ (Vijayendra Prasad) ಬರಲಿದ್ದಾರೆ. ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ನಾಳೆಯಿಂದ ಚಿತ್ರೋತ್ಸವಕ್ಕೆ ಚಾಲನೆ ಸಿಗಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಆಯೋಜಿಸಿರುವ ಈ ಚಿತ್ರೋತ್ಸವ ಮಾರ್ಚ್ 23 ರಿಂದ ಆರಂಭವಾಗಿ 30ನೇ ತಾರೀಖಿನವರೆಗೂ ನಡೆಯಲಿದೆ. ನೂರಕ್ಕೂ ಹೆಚ್ಚು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಇದನ್ನೂ ಓದಿ: ಸ್ಯಾಮ್ ಈಸ್ ಬ್ಯಾಕ್, ಹೊಸ ಫೋಟೋಶೂಟ್‌ನಲ್ಲಿ ಸಮಂತಾ ಮಿಂಚಿಂಗ್
ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದು, ಹರ್ಷಿಕಾ ಪೂಣಚ್ಚ ದೀಪ ಕಾರ್ಯಕ್ರಮಕ್ಕೆ ನೆರವು ನೀಡಲಿದ್ದಾರೆ. ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮಾರ್ಚ್ 24 ರಿಂದ ಬೆಂಗಳೂರಿನ ಒರಯನ್ ಮಾಲ್ ನಲ್ಲಿ ಚಿತ್ರ ಪ್ರದರ್ಶನಗಳು ನಡೆಯಲಿವೆ. ಚಿತ್ರ ಪ್ರದರ್ಶನ, ಗೋಷ್ಠಿಗಳು, ಸಂದರ್ಶನ, ಸಿನಿಮಾ ಸ್ಪರ್ಧೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಚಿತ್ರೋತ್ಸವದ ಭಾಗವಾಗಿ ಆಯೋಜನೆ ಮಾಡಿದ್ದಾರೆ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಅಶೋಕ್ ಕಶ್ಯಪ್.