ಮಂಡ್ಯ: ತರಗತಿಗೆ ಹಾಜರಾಗದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಕ್ಕೆ ಪುಂಡ ವಿದ್ಯಾರ್ಥಿಯೊಬ್ಬ ಶಿಕ್ಷಕರ ಎದುರು ಲಾಂಗ್ ಝಳಪಿಸಿದ ಪ್ರಕರಣ ನಾಗಮಂಗಲದಲ್ಲಿ (Nagamangala) ನಡೆದಿದೆ.
ನಗರದ ಖಾಸಗಿ ಕಾಲೇಜಿನಲ್ಲಿ (College) ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಈ ಬಗ್ಗೆ ಉಪನ್ಯಾಸಕರೊಬ್ಬರು ತಿಳುವಳಿಕೆ ಹೇಳುವಂತೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿ ಲಾಂಗ್ ಹಿಡಿದು ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕುತ್ತಿರುವ ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಮದುವೆಗೆ ಹುಡುಗಿ ಹುಡುಕದ ತಾಯಿಯನ್ನು ಬಡಿದು ಕೊಂದ ಮಗ!
ಈ ಸಂಬಂಧ ಬೆಳ್ಳೂರು ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿದ್ಯಾರ್ಥಿಯಿಂದ ಬೈಕ್ ಹಾಗೂ ಲಾಂಗ್‍ನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಮತ್ತೊಮ್ಮೆ ಈ ರೀತಿ ಮಾಡದಂತೆ ತಿಳುವಳಿಕೆ ಹೇಳಿ ಕಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಅಕ್ರಮ ಆರೋಪ – ಡೊನಾಲ್ಡ್ ಟ್ರಂಪ್ ಅರೆಸ್ಟ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]