‘ದಿ ಕೇರಳ ಸ್ಟೋರಿ’ ಚಿತ್ರ ತಡೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

Public TV
2 Min Read
The Kerala Story 2

ದೇ ಮೇ 5ರಂದು ರಿಲೀಸ್ ಆಗುತ್ತಿರುವ ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರಕ್ಕೆ ತಡೆ ನೀಡಬೇಕು ಎಂದು ಸುಪ್ರೀಂ ಕೋರ್ಟಿಗೆ (Supreme Court) ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ಅರ್ಜಿ ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್  ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಕೆ.ಎಂ. ಜೊಸೆಫ್ ಮತ್ತು ಬಿ.ವಿ ನಾಗರತ್ನ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆಯನ್ನು ನಿರಾಕರಿಸಿದ್ದು, ನೀವು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿ ಎಂದು ಸೂಚಿಸಿದ್ದಾರೆ.

The Kerala Story 5

ಈ ಸಿನಿಮಾದಲ್ಲಿ ದ್ವೇಷ ಪೂರಿತ ಸಂಭಾಷಣೆ ಹಾಗೂ ಪ್ರೊಪೊಗಾಂಡ ಸಿನಿಮಾ ಎಂದು ವಕೀಲ ನಿಜಾಮ್ ಪಾಷಾ (Pasha) ವಾದಿಸಿದ್ದರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ‘ನಿಮಗೆ ಹಾಗೆ ಅನಿಸಿದರೆ ನೀವು ಸಿನಿಮಾ ಸೆನ್ಸಾರ್ ಪ್ರಕ್ರಿಯೆಯನ್ನು ಪ್ರಶ್ನೆ ಮಾಡಬೇಕು’ ಎಂದು ತಿಳಿಸಿದೆ.  ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಎಂದಿರುವ ಕೋರ್ಟ್ ಮಾತಿಗೆ ಪಾಶಾ ಹೈಕೋರ್ಟ್ ಮೆಟ್ಟಿಲು ಏರುತ್ತಾರಾ ಅಥವಾ ಇಲ್ಲಿಗೆ ಅದನ್ನು ಕೈ ಬಿಡುತ್ತಾರಾ ಎನ್ನುವ ಕುತೂಹಲ ಕೂಡ ಮೂಡಿದೆ. ಇದನ್ನೂ ಓದಿ:ಗೃಹ ಪ್ರವೇಶದ ಸಂಭ್ರಮದಲ್ಲಿ ‘ರಾಧಾ ರಮಣ’ ನಟಿ ಕಾವ್ಯ ಗೌಡ

The Kerala Story 4

ಕಪೋಕಲ್ಪಿತ ಕಥೆ ಹಾಗೂ ಕೇರಳ ರಾಜ್ಯಕ್ಕೇ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ  ದಿ ಕೇರಳ ಸ್ಟೋರಿ ಸಿನಿಮಾ ಮಾಡಲಾಗಿದೆ ಎನ್ನುವ ಆರೋಪ ಹಲವರದ್ದು. ಒಂದು ಧರ್ಮವನ್ನು ಇಕ್ಕಟ್ಟಿಗೆ ಸಿಲುಕಿಸುವಂತಹ ಇಂತಹ ಚಿತ್ರವನ್ನು ರಿಲೀಸ್ ಮಾಡದಂತೆ ಕೇರಳದ ಅನೇಕ ಸಂಘಟನೆಗಳು ಒತ್ತಾಯಿಸಿವೆ. ಈ ಚಿತ್ರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಿನಿಮಾ ಮೇ 5ಕ್ಕೆ ಬಿಡುಗಡೆ ಆಗತ್ತಾ ಎನ್ನುವ ಅನುಮಾನ ಕೂಡ ಮೂಡಿದೆ.

The Kerala Story

ಕಾಂಗ್ರೆಸ್ ಜೊತೆಗೆ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (DYFI) ಕೂಡ ವಿರೋಧವನ್ನು ವ್ಯಕ್ತ ಪಡಿಸಿದ್ದು, ಸಂಘ ಪರಿವಾರದವರು ಸೇರಿಕೊಂಡು, ಒಂದು ಸಮುದಾಯದ ವಿರುದ್ಧ ಕೆಟ್ಟ ಅಭಿಪ್ರಾಯ ಹುಟ್ಟುವಂತೆ ಈ ಸಿನಿಮಾವನ್ನು ತೋರಿಸಲು ಹೊರಟಿದ್ದಾರೆ. ಇದು ಕೇರಳ ರಾಜ್ಯಕ್ಕೂ ಅಪಮಾನ ಮಾಡುವಂತಹ ಚಿತ್ರ. ಹಾಗಾಗಿ ಕೂಡಲೇ ಬಿಡುಗಡೆಯನ್ನು ತಡೆಯಬೇಕು ಎಂದು ಮನವಿ ಮಾಡಿವೆ.

The Kerala Story 1

ಎರಡು ದಿನಗಳ ಹಿಂದೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಸುತ್ತಾ ಹೆಣೆದಿರುವ ಕಥಾ ಹಂದರ ಬಿಜೆಪಿಗೆ ಚುನಾವಣೆ ಅಸ್ತ್ರವಾಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಮೇ 05 ರಂದು ದೇಶದಾದ್ಯಂತ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಹಲವು ಕಡೆ ವಿಶೇಷ ಪ್ರದರ್ಶನವನ್ನೂ ಆಯೋಜಿಸಲಾಗಿದೆ.

Share This Article