– ದಿಕ್ಕು ತಪ್ಪಿಸಲು ಡಮ್ಮಿ ಫೋನ್ ಬಳಕೆ
ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಯಾಮಾರಿಸಲು ಆರೋಪಿ ಮಾಸ್ಟರ್ ಪ್ಲಾನ್ ಮಾಡಿದ್ದಾನೆ. ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಶರ್ಟ್ ಮತ್ತು ಮತ್ತು ಪ್ಯಾಂಟ್ ಬದಲಿಸಿ ಹೋಗಿರುವ ವಿಚಾರ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
Advertisement
ದಾರಿ ಮಧ್ಯೆ ಆರೋಪಿ ಬಟ್ಟೆ (Clothes) ಬದಲಿಸಿ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದ್ದು, ಶರ್ಟ್ ಮೇಲೆ ಶರ್ಟ್, ಪ್ಯಾಂಟ್ ಮೇಲೆ ಪ್ಯಾಂಟ್ ಹಾಕಿಕೊಂಡು ಮುಂದೆ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಸಾಕ್ಷ್ಯ ಸಿಕ್ಕಿದೆ. ಅಲ್ಲದೇ 3-4 ಬಸ್ ಬದಲಿಸಿ ಪ್ರಯಾಣ ಮಾಡಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಗಡಿ ಬಿಟ್ಟು ಹೊರರಾಜ್ಯಕ್ಕೆ ಎಸ್ಕೇಪ್ ಆಗಿರುವ ಬಗ್ಗೆ ಶಂಕಿಸಿದ್ದು, ಸಿಸಿಬಿ, ಪೊಲೀಸ್ ಇಲಾಖೆಯ 200ಕ್ಕೂ ಹೆಚ್ಚು ಅಧಿಕಾರಿಗಳಿಂದ ತಲಾಶ್ ನಡೆಸಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ಬಾಂಬರ್ ಒಂಟಿ ತೋಳ ಭಯೋತ್ಪಾದಕ!
Advertisement
Advertisement
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿ 48 ಗಂಟೆಗಳು ಕಳೆದರೂ ಈವರೆಗೂ ಆರೋಪಿಯ ಬಗ್ಗೆ ಸುಳಿವು ಸಿಕ್ಕಿಲ್ಲ. ಸಿಸಿಟಿವಿ, ಮೊಬೈಲ್ ಟವರ್ ಡಂಪ್ ಅನಾಲಿಸಿಸ್ ಮಾಡಿದರೂ ಯಾವುದೇ ಸುಳಿವು ದೊರೆತಿಲ್ಲ. ಇದನ್ನೂ ಓದಿ: ಹೋಟೆಲ್ ಉದ್ಯಮದಲ್ಲಿ ನಾವೆಲ್ಲ ಅಣ್ಣ-ತಮ್ಮಂದಿರು, ಅನ್ನ ನೀಡುತ್ತೇವೆ ಹೊರತು ಕಿತ್ತುಕೊಳ್ಳುವುದಿಲ್ಲ: ರಾಮೇಶ್ವರಂ ಕೆಫೆ ಮಾಲೀಕ
Advertisement
ಸಿಸಿಟಿವಿಯಲ್ಲಿ ಆತ ಯಾರೊಂದಿಗೂ ಫೋನಿನಲ್ಲಿ ಮಾತನಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಆದರೆ ತನಿಖೆಗೆ ಇಳಿದಾಗ ಆತ ಡಮ್ಮಿ ಫೋನ್ ಅನ್ನು ಬಳಸಿದ್ದು, ಈ ಫೋನ್ ಬಳಸಿದ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅಮ್ಮ ಕಾಲ್ ಮಾಡದಿದ್ದರೆ…- ಕೆಫೆ ಬ್ಲಾಸ್ಟ್ ಭಯಾನಕ ಸತ್ಯ ಬಿಚ್ಚಿಟ್ಟ ಟೆಕ್ಕಿ
ಸಿಸಿಟಿವಿಯಲ್ಲಿ ಮೊಬೈಲ್ ತೋರಿಸಿರುವ ದೃಶ್ಯ ಕಂಡು ತನಿಖಾಧಿಕಾರಿಗಳು ಆರೋಪಿ ಸಿಕ್ಕಿಬಿದ್ದ ಎಂಬ ವಿಶ್ವಾಸದಲ್ಲಿದ್ದರು. ಆದರೆ ಬಾಂಬರ್ ಪಕ್ಕಾ ಪ್ಲಾನ್ ಮಾಡಿಕೊಂಡು ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿದ್ದಾನೆ. ಇದೀಗ ಘಟನಾ ಸ್ಥಳದಲ್ಲಿ ಸಿಕ್ಕ ಸಿಸಿಟಿವಿ, ಬಸ್‌ನಲ್ಲಿರುವ ಸಿಸಿಟಿವಿ ಪರಿಶೀಲನೆ ಮಾಡಿ ಆರೋಪಿಯ ವಾಕಿಂಗ್ ಸ್ಟೈಲ್ ಆಧರಿಸಿ ಸುಳಿವು ಪತ್ತೆಹಚ್ಚಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ. ಅಲ್ಲದೇ ಸ್ಥಳೀಯ ಪೊಲೀಸ್ ಠಾಣೆಗಳಿಗೂ ಸಿಸಿಟಿವಿ ದೃಶ್ಯ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಹಿಂದಿದ್ಯಾ ಐಸಿಸ್ ಕೈವಾಡ?