ಬೆಂಗಳೂರು: (Bengaluru) ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು (Towing) ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: KPTCL ಪರೀಕ್ಷಾ ಅಕ್ರಮ: ಮತ್ತೆ ಮೂವರು ಆರೋಪಿಗಳ ಬಂಧನ – ಬಂಧಿತರ ಸಂಖ್ಯೆ 20ಕ್ಕೆ ಏರಿಕೆ
Advertisement
Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.
Advertisement
Advertisement
ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ, ಟೋಯಿಂಗ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮಾಯಿಗೆ ಕಪ್ಪುಪಟ್ಟಿ ಪ್ರದರ್ಶನ