ದಾವಣಗೆರೆ: ಬಹು ದಿನಗಳಿಂದ ಹೊಟ್ಟೆ ನೋವಿನಿಂದ (Stomach Pain) ಬಳಲುತ್ತಿದ್ದ ಶಿಕ್ಷಕನೊಬ್ಬ (Teacher) ಕೆರೆಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ (Channagiri) ಪಟ್ಟಣದಲ್ಲಿ ನಡೆದಿದೆ.
ಚನ್ನಗಿರಿ ತಾಲೂಕಿನ ಹಿರೇಉಡ ಗ್ರಾಮದ ನಿವಾಸಿ ಕೃಷ್ಣನಾಯ್ಕ್ (42) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಇವರು ಮೈಸೂರಿನಲ್ಲಿ (Mysuru) ಸರ್ಕಾರಿ ಶಾಲೆಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಅನೇಕ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಇವರು, ನಾಲ್ಕು ದಿನಗಳ ಹಿಂದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೂ ಸಹ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಚನ್ನಗಿರಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಐಷಾರಾಮಿ ಕಾರು ಹೊಂದಿರುವವರು ಎಚ್ಚರ – ಮೈಸೂರಿನಲ್ಲಿ ಸಕ್ರಿಯವಾಗಿದೆ ಹೈಟೆಕ್ ಕಳ್ಳರ ಗ್ಯಾಂಗ್
Advertisement
Advertisement
ಕೆರೆಯ ವಾಕಿಂಗ್ ಪಾತ್ನಲ್ಲಿ ವಾಕಿಂಗ್ ಮಾಡುತ್ತಿದ್ದ ಜನರಿಗೆ ಮೃತದೇಹ ನೀರಿನಲ್ಲಿ ತೇಲುತ್ತಿರುವುದು ಕಾಣಿಸಿದೆ. ಕೂಡಲೇ ಚನ್ನಗಿರಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಕೆರೆಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ
Advertisement