– ಸರ್ಕಾರದ ಟೋಲ್ ಫ್ರೀ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದ ವಿದ್ಯಾರ್ಥಿನಿ
ಮುಂಬೈ: ಆರು ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ತಿಂಗಳುಗಟ್ಟಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮಹಾರಾಷ್ಟ್ರದ (Maharashtra) ಅಕೋಲಾ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು 47 ವರ್ಷದ ಪ್ರಮೋದ್ ಸರ್ದಾರ್ ಎಂದು ಗುರುತಿಸಲಾಗಿದೆ.
ಶಿಕ್ಷಕನ ವರ್ತನೆಯ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಕಲ್ಯಾಣ ಕೇಂದ್ರದ(Department of Child Welfare) ಟೋಲ್ ಫ್ರೀ ಸಹಾಯವಾಣಿಗೆ ಕರೆ ಮಾಡಿ ಘಟನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ. ಮಾಹಿತಿ ಆಧಾರದ ಮೇಲೆ ಶಿಕ್ಷಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಆತನ ವಿರುದ್ಧ ಪ್ರಥಮ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ನನ್ನ ಮಕ್ಕಳನ್ನು ಗುಂಡು ಹೊಡೆದು ಸಾಯಿಸಿ – ಪೊಲೀಸರ ಮುಂದೆ ರೌಡಿಶೀಟರ್ ತಂದೆ ಅಳಲು
ಮಾಹಿತಿಗಳ ಪ್ರಕಾರ ಕಳೆದ ನಾಲ್ಕು ತಿಂಗಳಿನಿಂದ ಶಿಕ್ಷಕ ಪ್ರಮೋದ್ ಸರ್ದಾರ್ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸುತ್ತಿದ್ದಾನೆ. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಮಂಗಳವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿ ಕೆಲ ಬಾಲಕಿಯರೊಂದಿಗೆ ಮಾತನಾಡಿ ಮಾಹಿತಿ ಕಲೆ ಹಾಕಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: MUDA Scam | ಹೊಸ ಟ್ವಿಸ್ಟ್ – ಸಿಎಂ ಪತ್ನಿ ಬರೆದ ಪತ್ರವನ್ನೇ ಅಧಿಕಾರಿಗಳು ತಿರುಚಿದ್ದಾರಾ?
ಮುಂಬೈ (Mubai) ಸಮೀಪದ ಬದ್ಲಾಪುರ್ ಪಟ್ಟಣದ ನರ್ಸರಿಯೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯೊಬ್ಬರು ಮೂರು ಮತ್ತು ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಭಾರೀ ಪ್ರತಿಭಟನೆಯ ನಡುವೆಯೇ ಈ ಘಟನೆ ನಡೆದಿದೆ. ಇದನ್ನೂ ಓದಿ: ಸಿಬಿಐ ತನಿಖೆಗೆ ಒಳಪಟ್ಟಿದ್ದ ಇಡಿ ಅಧಿಕಾರಿ ಆತ್ಮಹತ್ಯೆ