ದೇಶದಾದ್ಯಂತ ದಿ ಕೇರಳ ಸ್ಟೋರಿ (The Kerala Story) ಸಿನಿಮಾ ಮೂಲಕ ಸಂಚಲನ ಮೂಡಿಸಿದ್ದ ನಿರ್ದೇಶಕ ಸುದೀಪ್ರೋ ಸೇನ್ (Sudeepro Sen) ಇದೀಗ ಮತ್ತೊಂದು ಸಿನಿಮಾ ಘೋಷಣೆ (New Movie) ಮಾಡಿದ್ದಾರೆ. ಆ ಚಿತ್ರಕ್ಕೆ ಅವರು ಬಸ್ತರ್ ಎಂದು ಹೆಸರಿಟ್ಟಿದ್ದಾರೆ. ಈ ಕುರಿತು ಸ್ವತಃ ನಿರ್ದೇಶಕರೇ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದು, ಸನ್ ಸೈನ್ ಪಿಕ್ಚರ್ಸ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಲಿದೆ.
ಈಗಾಗಲೇ ಬಸ್ತರ್ (Bastar) ಸಿನಿಮಾದ ಕೆಲಸಗಳು ಸದ್ದಿಲ್ಲದೇ ಶುರುವಾಗಿವೆ ಎಂದು ಹೇಳಲಾಗಿದ್ದು, ಏಪ್ರಿಲ್ 5, 2024ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಿದೆ ಚಿತ್ರತಂಡ. ಇದು ಕೂಡ ನೈಜ ಘಟನೆಯನ್ನು ಆಧರಿಸಿದ ಸಿನಿಮಾವಾಗಿದ್ದು, ಯಾವ ಘಟನೆ ಎನ್ನುವುದನ್ನು ಚಿತ್ರತಂಡ ಹೇಳಿಕೊಂಡಿಲ್ಲ. ಹಾಗಾಗಿ ನಿರ್ದೇಶಕರು ಯಾವ ರೀತಿಯ ಕಥೆಯನ್ನು ಆಯ್ಕೆ ಮಾಡಿಕೊಂಡಿರಬೇಕು ಎನ್ನುವ ಕುತೂಹಲ ಮೂಡಿದೆ.
ಇದನ್ನೂ ಓದಿ:Exclusive: ಅರ್ಜುನ್ ಸರ್ಜಾ ನಿರ್ದೇಶನದ ಚಿತ್ರದಲ್ಲಿ ಉಪ್ಪಿ ಅಣ್ಣನ ಮಗ ನಟಿಸುತ್ತಾರಾ? ನಿರಂಜನ್ ಸ್ಪಷ್ಟನೆ
ಕಡಿಮೆ ಬಜೆಟ್ ನಲ್ಲಿ ತಯಾರಾದ ದಿ ಕಾಶ್ಮೀರ ಫೈಲ್ಸ್ ಸಿನಿಮಾ ಕಡಿಮೆ ಅವಧಿಯಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿತು. ವಿವಾದ, ಬೈಕಾಟ್, ಬ್ಯಾನ್ ನಡುವೆಯೂ ಹಲವು ರಾಜ್ಯಗಳಲ್ಲಿ ಇದು ತುಂಬಿದ ಪ್ರದರ್ಶನ ಕಂಡಿತು. ಕೆಲ ರಾಜ್ಯಗಳು ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದರಿಂದ ಹೆಚ್ಚಿನ ಮೊತ್ತ ನಿರ್ಮಾಪಕರಿಗೆ ಹರಿದು ಬಂದಿತ್ತು.
ಈಗ ಹೊಸದಾಗಿ ತಯಾರಿಸಲು ಹೊರಟಿರುವ ಬಸ್ತರ್ ಸಿನಿಮಾ ಕೂಡ ಮತ್ತೊಂದು ಕಾರಳ ಮುಖವನ್ನು ಬಿಚ್ಚಿಡಲಿದೆ ಎಂದು ಹೇಳಲಾಗುತ್ತಿದೆ. ಸುಳ್ಳಿನ ಹಿಂದಿರುವ ಸತ್ಯವನ್ನು ಈ ಸಿನಿಮಾ ಮೂಲಕ ಹೇಳುವುದಾಗಿ ಪೋಸ್ಟರ್ ನಲ್ಲಿಯೇ ಚಿತ್ರತಂಡ ತಿಳಿಸಿದೆ. ಹಾಗಾಗಿ ಯಾವ ಕಥೆಯನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ.