ಶಿವಣ್ಣ ನಟನೆಯ 131ನೇ ಸಿನಿಮಾದ ಪೋಸ್ಟರ್ ಹಂಚಿಕೊಂಡ ಟೀಮ್

Public TV
1 Min Read
Shivaraj Kumar

ಹೊಸ ವರ್ಷದ (New Movie) ಮುನ್ನ ದಿನ ಶಿವರಾಜ್ ಕುಮಾರ್ (Shivaraj Kumar) ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದರು ದಿನಕರ್ ತೂಗುದೀಪ್ (Dinkar Thugudeep). ಶಿವರಾಜ್ ಕುಮಾರ್ ಅವರ ಚಿತ್ರ ಮಾಡುವುದಾಗಿ ಘೋಷಿಸಿಕೊಂಡಿದ್ದರು. ಇದೀಗ ಶಿವಣ್ಣ ನಟನೆಯ 131ನೇ ಚಿತ್ರದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಶಿವರಾಜ್ ಕುಮಾರ್ ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದ್ದಾರೆ.

Shivaraj Kumar 2 1

ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

Shivaraj Kumar 1 1

ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಪ್ರೀ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗುತ್ತಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ.

Share This Article