ಶ್ರೀನಗರ: ಪಹಲ್ಗಾಮ್‌ನಲ್ಲಿ ರಕ್ತದೋಕುಳಿ ಹರಿಸಿದ (Pahalgam Terrorist Attack) ಉಗ್ರರ ಬಗ್ಗೆ ಮತ್ತಷ್ಟು ರೋಚಕ ಸಂಗತಿಗಳು ಹೊರಬೀಳುತ್ತಿವೆ. ಇದೀಗ ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸುವುದಕ್ಕಾಗಿಯೇ AK-47 ಮತ್ತು M4 ರೈಫಲ್‌ಗಳನ್ನ ಹೊತ್ತು ದಟ್ಟ ಕಾಡುಗಳ ಮಧ್ಯೆ 22 ಗಂಟೆಗಳ ಕಾಲ ನಡೆದು ಪಹಲ್ಗಾಮ್ (Pahalgam) ತಲುಪಿದ್ದರು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.
ಮೂಲಗಳ ಪ್ರಕಾರ, ಶಸ್ತ್ರಸಜ್ಜಿತ ಭಯೋತ್ಪಾದಕರು ಬೈಸರನ್ (Baisaran) ಕಣಿವೆ ಪ್ರದೇಶಕ್ಕೆ ತಲುಪಲು ದಟ್ಟ ಕಾಡಿನೊಳಗೆ ಸುಮಾರು 20-22 ಗಂಟೆಗಳ ಕಾಲ ನಡೆದುಕೊಂಡೇ ಬಂದಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮರದ ಮೇಲೆ ಕುಳಿತು ಇಡೀ ಕೃತ್ಯ ಸೆರೆ ಹಿಡಿದಿದ್ದ ರೀಲ್ಸ್ ವಿಡಿಯೋಗ್ರಾಫರ್ ಎನ್‌ಐಎಗೆ ಪ್ರಮುಖ ಸಾಕ್ಷಿ
ಆಧುನಿಕ ಶಸ್ತ್ರಾಸ್ತ್ರಗಳ ಬಳಕೆ
ಉಗ್ರ ಕೃತ್ಯಕ್ಕೆ ಭಯೋತ್ಪಾದಕರು ಆಧುನಿಕ AK-47 ಮತ್ತು M4 ಅಸಾಲ್ಟ್ ರೈಫಲ್‌ಗಳನ್ನು ಬಳಸಿದ್ದಾರೆ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ತಂಡ ದೃಢಪಡಿಸಿದೆ. ಜೊತೆಗೆ ಘಟನಾ ಸ್ಥಳದಲ್ಲಿ ಕಾಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಪಾಕ್ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಿದೆ: ಸಿದ್ದರಾಮಯ್ಯ
2 ಮೊಬೈಲ್ ಕಸಿದ ಉಗ್ರರು
ಇನ್ನೂ ದಾಳಿ ಸಂದರ್ಭದಲ್ಲಿ ರಕ್ತದೋಕುಳಿ ಹರಿಸಿದ ಉಗ್ರರು ಸ್ಥಳದಲ್ಲಿದ್ದ ಓರ್ವ ಪ್ರವಾಸಿಗರು ಹಾಗೂ ಸ್ಥಳೀಯ ನಿವಾಸಿಯೊಬ್ಬರ ಮೊಬೈಲ್ ಫೋನುಗಳನ್ನು ಕಸಿದುಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನೂ ಈ ಉಗ್ರ ಕೃತ್ಯದಲ್ಲಿ ಮೂವರು ಪಾಕಿಸ್ತಾನಿಯರು ಹಾಗೂ ಓರ್ವ ಸ್ಥಳೀಯ ಭಾಗಿಯಾಗಿದ್ದಾನೆಂದು ತಿಳಿದುಬಂದಿದೆ. ಸ್ಥಳೀಯ ಭಯೋತ್ಪಾದಕನನ್ನು ಆದಿಲ್ ಥೋಕರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಪಟಾಕಿ ಸಿಡಿದರೂ, ಪಾಕಿಸ್ತಾನವನ್ನೇ ದೂಷಿಸುತ್ತಾರೆ: ಶಾಹಿದ್ ಅಫ್ರಿದಿ
ಮರದ ಮೇಲೆ ಕುಳಿತು ಇಡೀ ಕೃತ್ಯ ಸೆರೆ
ಸದ್ಯ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ಮಳೆಗರೆಯುತ್ತಿದ್ದಂತೆ ಭಯಕ್ಕೆ ಮರ ಏರಿದ್ದ ರೀಲ್ಸ್ ವಿಡಿಯೋ ಗ್ರಾಫರ್ ಇಡೀ ಕೃತ್ಯವನ್ನು ಮರದ ಮೇಲೆ ಕುಳಿತುಕೊಂಡೆ ಸೆರೆ ಹಿಡಿಯುತ್ತಿದ್ದರು. ಇದೀಗ ಎನ್‌ಐಎಗೆ ಆ ವಿಡಿಯೋ ಗ್ರಾಫರ್ (Reels Videographer) ಪ್ರಮುಖ ಸಾಕ್ಷಿಯಾಗಿದ್ದಾರೆ. ಲಭ್ಯವಾಗಿರುವ ವಿಡಿಯೋ ಪ್ರಕಾರ, ನಾಲ್ವರು ಉಗ್ರರು ಎರಡು ಗುಂಪುಗಳಾಗಿ ಬೇರ್ಪಟ್ಟಿದ್ದರು. ಇಬ್ಬರು ಹುಲ್ಲುಗಾವಲು ಪ್ರದೇಶದ ಎರಡೂ ಬದಿ ಅವಿತುಕೊಂಡಿದ್ದರೆ, ಮತ್ತಿಬ್ಬರು ಅಲ್ಲೇ ಇದ್ದ ತಿಂಡಿ ಅಂಗಡಿ ಬಳಿ ಅವಿತಿದ್ದರು. ಮಧ್ಯಾಹ್ನ 2.30ರ ಸುಮಾರಿಗೆ, ಅಂಗಡಿಗಳ ಹಿಂದೆ ಅಡಗಿಕೊಂಡಿದ್ದ ಇಬ್ಬರು ಭಯೋತ್ಪಾದಕರು ಹೊರಬಂದರು. ಆಗ ಅಲ್ಲಿ ತಿಂಡಿ ತಿನ್ನುತ್ತಿದ್ದ ಸ್ಥಳೀಯರಲ್ಲದವರನ್ನ ಧರ್ಮದ ಬಗ್ಗೆ ಕೇಳುತ್ತಾ ಬಂದವರು. ಕೆಲವರು ತಪ್ಪಿಸಿಕೊಳ್ಳು ತಾನು ಮುಸ್ಲಿಂ ಎಂದು ಹೇಳಿದಾಗ ಕಲಿಮಾ ಪಠಿಸಲು ಹೇಳಲಾಯಿತು. ಬಳಿಕ ಕಲಿಮಾ ಪಠಿಸಲು ಸಾಧ್ಯವಾಗದವರನ್ನ ಪಾಯಿಂಟ್ ಬ್ಲಾಕ್‌ನಲ್ಲಿ ಶೂಟ್ ಮಾಡುತ್ತಾ ಬಂದರು. ಗುಂಡು ಹಾರಿಸುತ್ತಿದ್ದಂತೆ ಇಡೀ ಪ್ರದೇಶದಲ್ಲಿ ಭೀತಿ ಉಂಟಾಗಿ ಕೆಲವರು ದಿಕ್ಕಾಪಾಲಾಗಿ ಓಡಿದರು. ಈ ಸಂದರ್ಭದಲ್ಲಿ ಹುಲ್ಲುಗಾವಲಿನ ಜಿಪ್‌ಲೈನ್‌ನಲ್ಲಿ ಅವಿತಿದ್ದವರೂ ಗುಂಡು ಹಾರಿಸಲು ಶುರು ಮಾಡಿದ್ರು. ಈ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ವರದಿಗಳು ತಿಳಿಸಿವೆ.