ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯಲ್ಲಿ ಮಾಜಿ ಸಂಸದನ ಮನೆಗೆ ಹಾಡಹಗಲೇ ಅಪರಿಚಿತ ವ್ಯಕ್ತಿಯೋರ್ವ ನೀರು ಕೇಳುವ ನೆಪದಲ್ಲಿ ನೀರು ಕೊಡಲು ಬಂದ ಮಾಜಿ ಸಂಸದನ ಪತ್ನಿಯ ಬಂಗಾರದ ಸರವನ್ನು ಹರಿದು ಪರಾರಿಯಾಗಿದ್ದ ಕಳ್ಳನನ್ನು ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಹಾನಗಲ್ ಮೂಲದ ಪರಶುರಾಮ ಸಣ್ಣಮನಿ ಎಂಬ ವ್ಯಕ್ತಿ. ಈತನಿಂದ 1,85೦೦೦ ಮೌಲ್ಯದ 37ಗ್ರಾಂ ತೂಕದ ಬಂಗಾರದ ಚೈನ್ ಹಾಗೂ ಕೃತ್ಯಕ್ಕೆ ಬಳಸಿದ 15,೦೦೦ರೂ. ಮೌಲ್ಯದ ಬಜಾಜ್ ಡಿಸ್ಕವರ್ ಬೈಕ್ ವಶಕ್ಕೆ ಪಡೆಯಲಾಗಿದೆ.
ಘಟನೆ ಏನು?: ಕಾಂಗ್ರೆಸ್ ನಿಂದ ನಾಲ್ಕು ಬಾರಿ ಉತ್ತರ ಕನ್ನಡ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಿದ್ದ ದೇವರಾಯ ನಾಯ್ಕರವರ ಪತ್ನಿ ಗೀತಾರವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಅಪರಿಚಿತ ವ್ಯಕ್ತಿ ನೀರು ಕೇಳುವ ನೆಪ ಮಾಡಿಕೊಂಡು, ಅವರ ಕುತ್ತಿಗೆಯಲ್ಲಿ ಸರವನ್ನು ಕಸಿದುಕೊಂಡು ಹೋಗಿದ್ದನು. ಇದನ್ನೂ ಓದಿ: ಮಗು ಮಾಡಿಕೊಳ್ಳುವ ಬಗ್ಗೆ ಪ್ಲ್ಯಾನ್ ಇಲ್ವಾ- ವಿಕ್ಕಿ ಕೌಶಲ್ ಹೇಳೋದೇನು?
ತಕ್ಷಣ ಕಾರ್ಯಪ್ರವೃತ್ತರಾದ ಶಿರಸಿ ಮಾರುಕಟ್ಟೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಸಿಪಿಐ ರಾಮಚಂದ್ರ ನಾಯ್ಕ ನೇತೃತ್ವದಲ್ಲಿ ತಂಡ ರಚಿಸಿ ಕೊನೆಗೂ ಆರೋಪಿಯನ್ನು ಹಾವೇರಿ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿದ್ದಾರೆ.
Web Stories