Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಟ್ಟ ಖ್ಯಾತಿಯ ಗಿರಿರಾಜ್ ನಿರ್ದೇಶನದ ಚಿತ್ರಕ್ಕೆ ‘ರಾಮರಸ’ ಟೈಟಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಜಟ್ಟ ಖ್ಯಾತಿಯ ಗಿರಿರಾಜ್ ನಿರ್ದೇಶನದ ಚಿತ್ರಕ್ಕೆ ‘ರಾಮರಸ’ ಟೈಟಲ್

Cinema

ಜಟ್ಟ ಖ್ಯಾತಿಯ ಗಿರಿರಾಜ್ ನಿರ್ದೇಶನದ ಚಿತ್ರಕ್ಕೆ ‘ರಾಮರಸ’ ಟೈಟಲ್

Public TV
Last updated: April 19, 2024 12:41 pm
Public TV
Share
3 Min Read
Ramarasa 3
SHARE

ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ (Guru Deshpande) ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ ಪ್ರೊಡಕ್ಷನ್ ನಂ 4 ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಕೆಲವು ದಿನಗಳ ಹಿಂದೆ ನೆರವೇರಿತ್ತು. ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ ‘ರಾಮರಸ’ (Ramarasa) ಎಂದು ನಾಮಕರಣ ಮಾಡಲಾಗಿದೆ. ಜಟ್ಟ, ಮೈತ್ರಿ ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ (Giriraj BM) ನಿರ್ದೇಶಿಸುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು.

Ramarasa 4

ಶ್ರೀರಾಮನವಮಿಯ ದಿವಸದಂದೆ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ನಡೆಯಬೇಕಿತ್ತು. ಆದರೆ ಕಾರಣಾಂತರದಿಂದ ಮಾರನೇ ದಿನ ಬಿಡುಗಡೆಯಾಗುತ್ತಿದೆ. “ರಾಮರಸ” ಟೈಟಲ್ ಚೆನ್ನಾಗಿದೆ. ಮೋಷನ್ ಪೋಸ್ಟರ್ ಕೂಡ ಅದ್ಭುತವಾಗಿದೆ. ಗುರು ದೇಶಪಾಂಡೆ ಅವರು ನಮ್ಮ ಅಣ್ಣನ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ನೂತನ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ‌ .ನನ್ನ ಸ್ನೇಹಿತ ಕೂಡ ಈ ಚಿತ್ರದಲ್ಲಿ ನಟಸುತ್ತಿದ್ದಾನೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಧ್ರುವ ಸರ್ಜಾ ಹಾರೈಸಿದರು.

Ramarasa 2

ರಾಮರಸ , ಹಾರಾರ್ ಕಾಮಿಡಿ ಜಾನರ್ ನ ಚಿತ್ರ. ಜಿ ಅಕಾಡೆಮಿಯ ಹದಿನಾರು ಜನ ಹೊಸ ಪ್ರತಿಭೆಗಳಿಗೆ ತರಭೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಇಂದು ಧ್ರುವ ಸರ್ಜಾ ಅವರಿಂದ ಶೀರ್ಷಿಕೆ ಅನಾವರಣವನ್ನು ಮಾಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಂಗ್ ರೆಕಾರ್ಡಿಂಗ್ ಪೂಜೆ ಮಾಡುವುದು ವಿರಳ. ಹಳೆಯ ಸಂಪ್ರದಾಯಗಳನ್ನು ಪುನಃ ಗುರು ದೇಶಪಾಂಡೆ ಅವರು ಚಿತ್ರರಂಗಕ್ಕೆ ತರುತ್ತಿದ್ದಾರೆ ಎಂದು ನಿರ್ದೇಶಕ ಬಿ.ಎಂ.ಗಿರಿರಾಜ್ ತಿಳಿಸಿದರು.

Ramarasa 1

2008 ರಲ್ಲಿ ಮೊದಲ ನಿರ್ದೇಶನದೊಂದಿಗೆ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದೆ. ಅಂದಿನಿಂದ ನನ್ನ ಹೆಚ್ಚು ಚಿತ್ರಗಳಲ್ಲಿ‌ ಹೊಸ ಕಲಾವಿದರಿಗೆ ಅವಕಾಶ ಕೊಡುತ್ತಾ ಬಂದಿದ್ದೇನೆ. ಇದು ನಮ್ಮ‌ ಜಿ ಸಿನಿಮಾಸ್ ಲಾಂಛನದಲ್ಲಿ ನಾನು ನಿರ್ಮಾಣ ಮಾಡುತ್ತಿರುವ ನಾಲ್ಕನೇ ಸಿನಿಮಾ.‌ ಈ ಚಿತ್ರದಲ್ಲೂ ಜಿ ಅಕಾಡೆಮಿಯ ಹದಿನಾರು ಜನ ನೂತನ ಪ್ರತಿಭೆಗಳು ಅಭಿನಯಿಸುತ್ತಿದ್ದಾರೆ. ಅವರಿಗೆ ಅಭಿನಯಕ್ಕೆ ಬೇಕಾದ ವರ್ಕ್ ಶಾಪ್ ನಡೆಸಲಾಗಿದೆ. ಇವರೊಂದಿಗೆ ಕನ್ನಡದ ಖ್ಯಾತ ನಟರೊಬ್ಬರು ನಟಿಸುತ್ತಿದ್ದು, .ಮಾತುಕತೆ ಅಂತಿಮ ಹಂತದಲ್ಲಿದೆ. ಮೇ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಎಂ.ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅವರ ಹಿಂದಿನ ಚಿತ್ರಗಳು ನನಗೆ ಬಹಳ ಇಷ್ಟವಾಗಿದ್ದವು. ಕನ್ನಡದಲ್ಲಷ್ಟೇ ಕಮರ್ಷಿಯಲ್, ಆರ್ಟ್ ಅಂತ ವಿಭಾಗಗಳಿದೆ. ಆದರೆ ಬೇರೆ ಭಾಷೆಗಳಲ್ಲಿ ಆ ಚಿತ್ರ ಪ್ರಶಸ್ತಿ ಪಡೆದುಕೊಂಡಿರುತ್ತದೆ ಹಾಗೂ ಗಳಿಕೆಯಲ್ಲೂ ಮುಂದಿರುತ್ತದೆ. ಈ ಚಿತ್ರ ಕೂಡ ಅಂತಹ ಚಿತ್ರವಾಗಬೇಕೆಂದು ನನ್ನ ಆಸೆ. ಬಿ.ಜೆ.ಭರತ್ ಈಗಾಗಲೇ “ರಾಮರಸ” ದ ಎರಡು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್ ಆರ್ಯ ಹಾಡುಗಳನ್ನು ಬರೆದಿದ್ದಾರೆ. ಸುನೀಲ್ ಹೆಚ್ ಸಿ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ‌ ನಿರ್ವಹಿಸುತ್ತಿದ್ದಾರೆ‌. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ಮಾಪಕ ಗುರು ದೇಶಪಾಂಡೆ.

ಜಿ ಅಕಾಡೆಮಿಯಲ್ಲಿ ಅಭಿನಯ ಕಲಿತಿರುವ ಹದಿನಾರು ನೂತನ ಪ್ರತಿಭೆಗಳು ಹಾಗೂ ಸಹ ನಿರ್ದೇಶಕರಾಗಿ ಕಾರ್ಯ ನಿರವಹಿಸಲಿರುವ ಮೂವರು ನವ ಸಹ ನಿರ್ದೇಶಕರು ಹಾಗೂ ನೂತನ ಸಹ ನಿರ್ಮಾಪಕರೊಬ್ಬರು ತಮ್ಮ ಪರಿಚಯ ಮಾಡಿಕೊಂಡರು.  ಸಂಗೀತ ನಿರ್ದೇಶಕ ಬಿ.ಜೆ.ಭರತ್. ಗೀತರಚನೆಕಾರ ಪುನೀತ್ ಆರ್ಯ, ಕಾರ್ಯಕಾರಿ ನಿರ್ಮಾಪಕ ಸುನೀಲ್ ಹೆಚ್ ಸಿ ಗೌಡ ಹಾಗೂ ವಿತರಕ ವೆಂಕಟ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

TAGGED:Giriraj BMGuru DeshpandeTitle Ramarasaಗಿರಿರಾಜ್ ಬಿ.ಎಂಗುರು ದೇಶಪಾಂಡೆಟೈಟಲ್ ರಾಮರಸ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
3 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
11 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
14 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
26 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
58 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?