ಕನ್ನಡದ ಹೆಸರಾಂತ ನಿರ್ದೇಶಕ, ನಟ ರಿಷಭ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದ ಮತ್ತೊಂದು ದೃಶ್ಯ ತುಣುಕು ಇದೇ ಸೆಪ್ಟಂಬರ್ 5 ರಂದು ಬಿಡುಗಡೆ ಆಗಲಿದೆ. ಕಾಂತಾರ ಸಿನಿಮಾದ ಟ್ರೈಲರ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ ಹೊಂಬಾಳೆ ಫಿಲ್ಮ್ಸ್. ಎಲ್ಲರೂ ಇಷ್ಟ ಪಡುವಂತಹ ಟ್ರೈಲರ್ ಇದಾಗಲಿದೆ ಎಂದಿದ್ದಾರೆ ನಿರ್ದೇಶಕರು.
ಭಾರತ ಚಿತ್ರರಂಗಕ್ಕೆ “ಕೆ.ಜಿ.ಎಫ್” ಎಂಬ ಅತ್ಯುತ್ತಮ ಚಿತ್ರ ನೀಡಿರುವ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ ಹಾಗೂ ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರದ ಟ್ರೈಲರ್ ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಶುಭದಿನದಂದು ಬಿಡುಗಡೆಯಾಗಲಿದೆ. ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿ: ಆರ್ಯವರ್ಧನ್ ಅಲ್ಲ, ಅವನ ಸಹೋದರನ ಪಾತ್ರದಲ್ಲಿ ಹರೀಶ್ ರಾಜ್
ಈಗಾಗಲೇ ಹಲವು ವಿಶೇಷಗಳಿಂದ “ಕಾಂತಾರ” ಮನೆಮಾತಾಗಿದೆ. ಇತ್ತೀಚಿಗೆ ಬಿಡುಗಡೆಯಾದ ಕರುನಾಡ ಸಂಸ್ಕೃತಿಯನ್ನು ಬಿಂಬಿಸುವ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ, ವಿಜಯಪ್ರಕಾಶ್, ಅನನ್ಯ ಭಟ್ ಹಾಡಿರುವ “ಸಿಂಗಾರ ಸಿರಿಯೆ” ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಂದೆ ಬಿಡುಗಡೆಯಾಗಲಿರುವ ಟ್ರೈಲರ್ ಹಾಗೂ ಚಿತ್ರಕ್ಕಾಗಿ ಕಲಾರಸಿಕರು ಕಾತುರದಿಂದ ಕಾಯುತ್ತಿದ್ದಾರೆ.