ಲಂಡನ್: ಬ್ಯಾಂಕ್‍ಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ಮರುಪಾವತಿ ಮಾಡದೇ ಲಂಡನ್‍ನಲ್ಲಿ ತಲೆಮರೆಸಿಕೊಂಡಿದ್ದ ಮದ್ಯದ ದೊರೆ ವಿಜಯ್ ಮಲ್ಯ ಗಡಿಪಾರಿಗೆ ಬ್ರಿಟನ್ ಆಂತರಿಕ ಸಂಸತ್ತು ಒಪ್ಪಿಗೆ ನೀಡಿದೆ.
ಉದ್ಯಮಿ ಮಲ್ಯರನ್ನು ಗಡಿಪಾರು ಮಾಡಲು ಭಾರತ ಸರ್ಕಾರ ಮಾಡಿದ್ದ ಮನವಿಗೆ ಬ್ರಿಟನ್ ಸಚಿವಾಲಯ ಸಮ್ಮತಿಸಿದೆ. ಭಾರತದ ಮನವಿಗೆ ಬ್ರಿಟನ್ ಗೃಹ ಕಾರ್ಯದರ್ಶಿ ಸಜೀದ್ ಜಾವಿದ್ ಫೆಬ್ರವರಿ 3 ರಂದು ಸಹಿ ಹಾಕಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಬ್ರಿಟನ್ ಸರ್ಕಾರದ ಈ ನಿರ್ಣಯದಿಂದ ಮಲ್ಯಗೆ ಭಾರೀ ಹಿನ್ನಡೆ ಆಗಿದೆ.
Advertisement
Advertisement
ಕಳೆದ ವರ್ಷದ ಡಿಸೆಂಬರಿನಲ್ಲಿ ಈ ಕುರಿತು ವಿಚಾರಣೆ ನಡೆಸಿ ತೀರ್ಪು ನೀಡಿದ್ದ ಲಂಡನ್ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಮಲ್ಯ ಗಡಿಪಾರಿಗೆ ಅನುಮತಿ ನೀಡಿತ್ತು. ಅಲ್ಲದೇ ಗಡಿಪಾರು ಆದೇಶ ನೀಡುವುದರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದಿಲ್ಲ ಎಂದು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ನ್ಯಾಯಾಲಯದ ತೀರ್ಪಿಗೆ ಸಂಸತ್ ಒಪ್ಪಿಗೆ ಮಾತ್ರ ಬಾಕಿ ಇತ್ತು. ಆದರೆ ಮಲ್ಯ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ ಬ್ಯಾಂಕ್ ಸಾಲ ಮರು ಪಾವತಿ ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದರು.
Advertisement
ಮುಂದಿನ ನಡೆ ಏನು?
ಮಲ್ಯ ಗಡಿಪಾರಿನ ಕುರಿತು ಲಂಡನ್ ಸಂಸತ್ ಕೈಗೊಂಡಿರುವ ನಿರ್ಣಯದಿಂದ ಭಾರತ ಸರ್ಕಾರಕ್ಕೆ ಮತ್ತೊಂದು ಗೆಲುವು ಸಿಕ್ಕಂತಾಗಿದೆ. ಸದ್ಯ ಲಂಡನ್ ಆಂತರಿಕ ಸಂಸತ್ತಿನ ನಿರ್ಣಯವನ್ನು ಪ್ರಶ್ನಿಸಿ 14 ದಿನಗಳ ಒಳಗೆ ಮೇಲ್ಮನವಿ ಸಲ್ಲಿಸಲು ವಿಜಯ್ ಮಲ್ಯಗೆ ಅವಕಾಶ ಇದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv