ವಾಷಿಂಗ್ಟನ್: ರಷ್ಯಾ, ಉಕ್ರೇನ್ ವಿರುದ್ಧ ಯುದ್ದ ಕಹಳೆ ಕೂಗಿದ್ದು, ರಷ್ಯಾದ ಸೈನ್ಯ ಉಕ್ರೇನ್‍ನಲ್ಲಿದೆ. ಈ ಹಿನ್ನೆಲೆ ಅಮೆರಿಕ, ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧಗಳನ್ನು ಹೇರಿದೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಎನ್‍ಎಟಿಒ ಒಪ್ಪಂದದಡಿ ರಷ್ಯಾದ ಮೇಲೆ ಕೆಲವೊಂದು ನಿರ್ಬಂಧ ಹೇರಲಾಗಿದೆ. ಉಕ್ರೇನ್ ನ ಮತ್ತು ಅಮೆರಿಕದ ಯಾವುದೇ ಪ್ರದೇಶಗಳ ಮೇಲೆ ನಿರ್ಧಾರ ಕೈಗೊಳ್ಳುವ, ಯಾವುದೇ ವ್ಯಕ್ತಿ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಉಕ್ರೇನ್ ದೇಶವನ್ನೇ ಮೂರು ಭಾಗ ಮಾಡಿದ ರಷ್ಯಾ
Advertisement
Advertisement
ಉಕ್ರೇನ್‍ನ ಡಿಎನ್‍ಆರ್ ಮತ್ತು ಎಲ್‍ಎನ್‍ಆರ್ ಎಂದು ಕರೆಯಲ್ಪಡುವ ಡೊನಸ್ಕ್ ಮತ್ತು ಲಂಗಸ್ಕ್ ಪ್ರದೇಶದಲ್ಲಿ ಅಮೆರಿಕದ ಪ್ರಜೆಗಳು ಯಾವುದೇ ಹೊಸ ಹೂಡಿಕೆ, ವ್ಯಾಪಾರ ಮತ್ತು ಹಣಕಾಸು ನೆರವು ನೀಡುವುದನ್ನು ನಿಷೇಧಿಸಲಾಗಿದೆ ಎಂದು ಶ್ವೇತಭವನದಲ್ಲಿ ಹೇಳಿದರು.
Advertisement
Advertisement
ಈ ರೀತಿಯ ಫೋಷಣೆಯಿಂದ 2 ಸ್ವಯಂಫೋಷಿತ ಪ್ರಜಾಪ್ರಭುತ್ವ ರಾಷ್ಟ್ರಗಳು ಈ ರೀತಿ ನಿರ್ಬಂಧ ಹೇರಿಕೊಂಡರೆ ಸೋವಿಯತ್ ಒಕ್ಕೂಟದ ಪತನವಾಗುವ ಸಾಧ್ಯತೆ ಇದೆ. ಪೂರ್ವ-ಪಶ್ಚಿಮ ಸಂಘರ್ಷದಲ್ಲಿ ಇದು ಹೊಸ ಯುಗಕ್ಕೆ ನಾಂದಿಯಾಗುತ್ತೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.
ಉಕ್ರೇನ್‍ನ ಅಪಾಯಕಾರಿ ಪ್ರದೇಶಗಳಿಂದ 241 ಮಂದಿ ಭಾರತೀಯರನ್ನು ವಾಪಸ್ ಕರೆಸಿಕೊಳ್ಳಲಾಗಿದೆ. ಇದನ್ನೂ ಓದಿ: ಉಕ್ರೇನ್ ತೊರೆಯಿರಿ – ವಿದ್ಯಾರ್ಥಿಗಳಿಗೆ ಭಾರತ ಸಲಹೆ
ಈ ಹಿಂದೆ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳ ನಿಯಂತ್ರಣದಲ್ಲಿರುವ ದೋನೆಟ್‍ಸ್‍ಕೋ, ಲುಹಾನ್‍ಸ್‍ಕೋ ಪ್ರಾಂತ್ಯಗಳನ್ನು ಎರಡು ಪ್ರತ್ಯೇಕ ದೇಶಗಳೆಂದು ಗುರುತಿಸಿ ಪುಟಿನ್ ಆದೇಶ ಹೊರಡಿಸಿದ್ದರು. ಹೊಸ ದೇಶಗಳಲ್ಲಿ ಶಾಂತಿ ಸ್ಥಾಪನೆ ಆಗುವವರೆಗೂ ರಷ್ಯಾದ ಶಾಂತಿಪಾಲನಾ ಪಡೆಗಳನ್ನು ನಿಯೋಜಿಸಲು ತೀರ್ಮಾನಿಸಿದೆ. ಈ ಮೂಲಕ ಉಕ್ರೇನ್ ಅಸ್ತಿತ್ವವನ್ನೇ ಪ್ರಶ್ನಿಸಿ ಯೂರೋಪ್ ದೇಶಗಳಿಗೆ ಪುಟಿನ್ ಭಯ ಹುಟ್ಟಿಸಿದ್ದರು.