ಬೀದರ್: 12ನೇ ಶತಮಾನದಲ್ಲಿ ಬಸವಾದಿ ಶರಣರು ಅಸ್ಪೃಶ್ಯತೆ ವಿರುದ್ಧ ಹೋರಾಡಿದ ನೆಲದಲ್ಲೇ ಇನ್ನೂ ಕೂಡ ಅಸ್ಪೃಶ್ಯತೆ ಜೀವಂತವಾಗಿದೆ.
Advertisement
ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಅಂಗನವಾಡಿಗೆ ದಲಿತ ಮಹಿಳೆಯರು ನೇಮಕವಾಗಿರುವ ಹಿನ್ನೆಲೆ ಮೇಲ್ಜಾತಿ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೌರಿಂಗ್, ಲೇಡಿ ಕರ್ಜನ್ ಆಸ್ಪತ್ರೆಗೆ ವಕ್ಫ್ ಮಹಿಳಾ ಪರಿಷತ್ತಿನಿಂದ 5 ಲಕ್ಷ ಸಹಾಯಧನ
Advertisement
ಅಂಗನವಾಡಿ ಶಿಕ್ಷಕಿಯಾಗಿ ದಲಿತ ಸಮುದಾಯದ ಸುಮಿತ್ರಾ ಬಾಯಿ ನೇಮಕವಾಗಿದ್ದರೆ, ಶಾಲೆಯ ಸಹಾಯಕಿಯೂ ದಳಿತ ಮಹಿಳೆಯಾಗಿದ್ದಾರೆ. ಈ ಹಿನ್ನೆಲೆ ಮೇಲ್ಜಾತಿಯ ಜನರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕಿದ್ದಾರೆ.
Advertisement
Advertisement
ಗ್ರಾಮದ 3 ಅಂಗನವಾಡಿ ಕೇಂದ್ರಗಳ ಪೈಕಿ 2 ಅಂಗನವಾಡಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಆದರೆ ಸಾಮಾನ್ಯ ವಾರ್ಡಿನ ಅಂಗನವಾಡಿ ಕೇಂದ್ರ ಅಸ್ಪೃಶ್ಯತೆಯ ವಿವಾದಕ್ಕೀಡಾಗಿದೆ. 2 ವರ್ಷಗಳಿಂದ ಕೋವಿಡ್ ಕಾರಣದಿಂದ ಬಂದ್ ಆಗಿದ್ದ ಅಂನವಾಡಿ ಇದೀಗ ಅಸ್ಪೃಶ್ಯತೆ ಕಾರಣಕ್ಕೆ ಮಕ್ಕಳೇ ಮರಳದಂತಾಗಿದೆ. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ