ಚಿಕ್ಕೋಡಿ: ರಂಗ ಪಂಚಮಿ ಹಬ್ಬದ ಪ್ರಯುಕ್ತ ಬಣ್ಣ ಆಡುವ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಬಣ್ಣ ಎರಚಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷನನ್ನು ತಳ್ಳಾಡುವುದರ ಜೊತೆಗೆ ಪೊಲೀಸರ ಮೇಲೆಯೇ ಯುವಕರ ಗುಂಪೊಂದು ಹಲ್ಲೆ ಮಾಡಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕೋಡಿ ಪಿಎಸ್‍ಐ ಹಾಗೂ ಸಿಬ್ಬಂದಿ ದೌಡಾಯಿಸಿದ್ದಾರೆ. ಹೆಚ್ಚಿನ ಪೊಲೀಸ್ ನಿಯೋಜನೆ ಬಳಿಕ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಇದರಿಂದಾಗಿ ಕರೋಶಿ ಗ್ರಾಮ ಸಂಪೂರ್ಣ ಬಂದ್ ಆಗಿದೆ. ಇದನ್ನೂ ಓದಿ: ಮರಿ ಜೊತೆ ಇದ್ದ ಆನೆ ಮೇಲೆ ಜೆಸಿಬಿ ಹರಿಸಲು ಮುಂದಾದ ಚಾಲಕ – ಸಾರ್ವಜನಿಕರಿಂದ ಆಕ್ರೋಶ
ಸದ್ಯ ಕರೋಶಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜನರು ಆತಂಕದಲ್ಲಿದ್ದಾರೆ. ಸ್ಥಳದಲ್ಲೆ ಪೊಲೀಸ್ ಹಿರಿಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಗೋಮಾಂಸ ಸಾಗಿಸುತ್ತಿದ್ದಾನೆಂದು ಶಂಕಿಸಿ ಹಿಗ್ಗಾಮುಗ್ಗಾ ಥಳಿಸಿದ್ರು