ಮೊನ್ನೆಯಷ್ಟೇ ಉತ್ತರ ಕಾಂಡ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಶಿವರಾಜ್ ಕುಮಾರ್ (Shivaraj Kumar). ಇವರ ಎಂಟ್ರಿ ಅದ್ಭುತವಾಗಿ ಇರಲೆಂದು ವಿಶೇಷ ವಿಡಿಯೋವೊಂದನ್ನು ಮಾಡಿ ಶಿವಣ್ಣನನ್ನು ಬರಮಾಡಿಕೊಂಡಿದೆ ಉತ್ತರಕಾಂಡ ಟೀಮ್. ಈಗ ಬೆಳಗಾವಿಯಲ್ಲಿ ನಡೆಯುತ್ತಿರುವ ಉತ್ತರಕಾಂಡ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದಾರೆ. ಜೊತೆಗೆ ಪತ್ನಿ ಗೀತಾ ಕೂಡ ಹೋಗಿದ್ದಾರೆ.
ಡಾಲಿ (Daali Dhananjay) ನಟನೆಯ ‘ಉತ್ತರಕಾಂಡ’ (Uttarakanda Film) ಸಿನಿಮಾ ತಂಡಕ್ಕೆ ಕಲಾವಿದರ ದಂಡೇ ಸೇರ್ಪಡೆಯಾಗುತ್ತಿದೆ. ಡಾಲಿಗೆ ಜೋಡಿಯಾಗೋ ಆ ನಾಯಕಿ ಯಾರು? ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಡಾಲಿಗೆ ಜೋಡಿಯಾಗಿ ಐಶ್ವರ್ಯಾ ರಾಜೇಶ್ (Aishwarya Rajesh) ಎಂಟ್ರಿ ಕೊಟ್ಟಿದ್ದಾರೆ.
- Advertisement
- Advertisement
ಚೈತ್ರಾ ಆಚಾರ್, ದಿಗಂತ್ ಪಾತ್ರದ ಬಗ್ಗೆ ರಿವೀಲ್ ಆದ ಬೆನ್ನಲ್ಲೇ ಐಶ್ವರ್ಯಾ ರಾಜೇಶ್ ಕೂಡ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಡಾಲಿ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನಟಿ ಸ್ಯಾಂಡಲ್‌ವುಡ್‌ಗೆ ಲಗ್ಗೆ ಇಟ್ಟಿದ್ದಾರೆ. ಬಾಲನಟಿ, ನಾಯಕಿಯಾಗಿ ತೆಲುಗು, ತಮಿಳಿನಲ್ಲಿ ಗುರುತಿಸಿಕೊಂಡಿರುವ ಐಶ್ವರ್ಯಾಗೆ ‘ಉತ್ತರಕಾಂಡ’ ಚಿತ್ರದಲ್ಲಿ ಮುಖ್ಯ ಪಾತ್ರವೇ ಸಿಕ್ಕಿದೆ.
ಕನ್ನಡ ಸಿನಿಮಾ ರಂಗದ ಹಿರಿಯ ನಟಿ, ಉಮಾಶ್ರೀ (Umashree) ಉತ್ತರಕಾಂಡ ಟೀಮ್ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪಂಢರಿಬಾಯಿ (Pandharibai) ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಸಾಕಷ್ಟು ಅನುಭವಿ ಕಲಾವಿದರು ನಟಿಸುತ್ತಿರುವುದು ವಿಶೇಷ