ಅಬುಧಾಬಿ: ಭಾರತೀಯ ಕಾರ್ಮಿಕರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ದುಬೈನಲ್ಲಿ ಭೂಮಿ ನೀಡುವುದಾಗಿ ಯುಎಇ ಉಪಾಧ್ಯಕ್ಷರು ಘೋಷಿಸಿದ್ದಾರೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಕೃತಜ್ಞತೆ ಸಲ್ಲಿಸಿದ್ದಾರೆ.
ಅಬುಧಾಬಿಯಲ್ಲಿ (Abu Dhabi) ಹಿಂದೂ ದೇವಾಲಯ ಉದ್ಘಾಟಿಸಿ ನಂತರ ಮಾತನಾಡಿದ ಅವರು, ಇಲ್ಲಿಯವರೆಗೆ ಬುರ್ಜ್ ಖಲೀಫಾ, ಫ್ಯೂಚರ್ ಮ್ಯೂಸಿಯಂ, ಶೇಖ್ ಜಾಯೆದ್ ಮಸೀದಿ ಮತ್ತು ಇತರ ಹೈಟೆಕ್ ಕಟ್ಟಡಗಳಿಗೆ ಹೆಸರುವಾಸಿಯಾಗಿದ್ದ ಯುಎಇ ಈಗ ತನ್ನ ಗುರುತಿಗೆ ಮತ್ತೊಂದು ಸಾಂಸ್ಕೃತಿಕ ಅಧ್ಯಾಯವನ್ನು ಸೇರಿಸಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸುವ ವಿಶ್ವಾಸವಿದೆ. ಇದರಿಂದ ಯುಎಇಗೆ ಬರುವವರ ಸಂಖ್ಯೆಯೂ ಹೆಚ್ಚುತ್ತದೆ ಮತ್ತು ಜನರಿಂದ ಜನರ ಸಂಪರ್ಕವೂ ಹೆಚ್ಚುತ್ತದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: UAE ಅಧ್ಯಕ್ಷರಿಗೆ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಿ: ಮೋದಿ ಮನವಿ
Advertisement
Advertisement
ಇಡೀ ಭಾರತ ಮತ್ತು ಪ್ರಪಂಚದಾದ್ಯಂತ ವಾಸಿಸುವ ಲಕ್ಷಾಂತರ ಭಾರತೀಯರ ಪರವಾಗಿ, ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತು ಯುಎಇ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.
Advertisement
ಯುಎಇ ಸುವರ್ಣ ಅಧ್ಯಾಯ ಬರೆದಿದೆ. ದೇವಾಲಯದ ಉದ್ಘಾಟನೆಯು ವರ್ಷಗಳ ಕಠಿಣ ಪರಿಶ್ರಮವನ್ನು ಹೊಂದಿದೆ. ಅನೇಕರ ಕನಸು ದೇವಾಲಯದೊಂದಿಗೆ ಸಂಪರ್ಕ ಹೊಂದಿದೆ. ಸ್ವಾಮಿನಾರಾಯಣ ಅವರ ಆಶೀರ್ವಾದವೂ ಎಲ್ಲರ ಮೇಲಿದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ
Advertisement
ಈ ದೇವಾಲಯವು ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ. ಮಂದಿರ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯ. ನಾನು ಮಾತೆ ಭಾರತಿಯನ್ನು ಆರಾಧಿಸುತ್ತೇನೆ. ದೇವರು ನನಗೆ ಕೊಟ್ಟಿರುವ ಪ್ರತಿಯೊಂದು ಕ್ಷಣವೂ ಭಾರತಮಾತೆಗಾಗಿ ಎಂದು ಮೋದಿ ತಿಳಿಸಿದ್ದಾರೆ.