ಮುಂಬೈ: ಆಗಸ್ಟ್ 23ರಂದು ನಿಧನರಾದ ಬಿಜೆಪಿ ನಾಯಕಿ ಹಾಗೂ ನಟಿ ಸೋನಾಲಿ ಫೋಗಟ್ ಅವರಿಗೆ ಪಬ್‌ನಲ್ಲಿ ಬಲವಂತವಾಗಿ ಮದ್ಯ ಕುಡಿಸುವುದನ್ನು ತೋರಿಸುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಘಟನೆ ಗೋವಾದಲ್ಲಿ ನಡೆದಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಆಕೆಗೆ ಬಲವಂತವಾಗಿ ಮದ್ಯ ಕುಡಿಸುತ್ತಿರುವ ವ್ಯಕ್ತಿ ಸುಧೀರ್ ಸಾಂಗ್ವಾನ್ ಎಂಬುದು ತಿಳಿದುಬಂದಿದೆ.
ಈ ನಡುವೆ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಶನಿವಾರ, ಸೋನಾಲಿ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ಭೇಟಿಯ ಬಳಿಕ ಬಿಜೆಪಿ ನಾಯಕಿಯ ಸಾವಿನ ಬಗ್ಗೆ ಕೇಂದ್ರೀಯ ತನಿಖಾ ದಳದಿಂದ(ಸಿಬಿಐ) ತನಿಖೆ ನಡೆಸುವಂತೆ ಗೋವಾ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
Advertisement
Advertisement
ಭೇಟಿಯ ಬಳಿಕ ಮಾತನಾಡಿದ ಸೋನಾಲಿ ಸಹೋದರಿ ರೂಪೇಶ್, ಘಟನೆ ಬಗ್ಗೆ ಸಿಬಿಐ ತನಿಖೆ ನಡೆಯಲಿದೆ ಮತ್ತು ನಮಗೆ ನ್ಯಾಯ ಸಿಗಲಿದೆ ಎಂದು ಸಿಎಂ ಖಟ್ಟರ್ ನಮಗೆ ಭರವಸೆ ನೀಡಿದ್ದಾರೆ. ಇನ್ನು ಎಲ್ಲವೂ ಮುನ್ನೆಲೆಗೆ ಬರಲಿದೆ. ಬಲವಂತವಾಗಿ ಮಾಡಿದ್ದನ್ನು ವೀಡಿಯೋದಲ್ಲಿ ಕಾಣಬಹುದು. ಅವಳ ಫೋನ್ ಆಫ್ ಆದ ಬಳಿಕ ಏನೋ ತಪ್ಪಾಗಿದೆ ಎಂದು ಆಕೆ ನನಗೆ ಹೇಳಿದ್ದಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಲಗಿದ್ದ ತಾಯಿಯ ಪಕ್ಕದಿಂದ ಮಗು ಕದ್ದು ಓಡಿದ – ಖತರ್ನಾಕ್ ಕಳ್ಳನ ವೀಡಿಯೋ ವೈರಲ್
Advertisement
NEW CCTV FOOTAGE OF SONALI PHOGAT. #SonaliPhogat pic.twitter.com/bDXcg1EOqN
— Anamika gaur (@ByAnamika) August 27, 2022
Advertisement
ಸೋನಾಲಿ ಫೋಗಟ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಗೋವಾದ ನ್ಯಾಯಾಲಯ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಆರೋಪಿಗಳಾದ ಸುಧೀರ್ ಸಾಂಗ್ವಾನ್(ಸೋನಾಲಿ ಆಪ್ತ ಸಹಾಯಕ) ಮತ್ತು ಸುಖ್ವಿಂದರ್ ಸಿಂಗ್(ಸುಧೀರ್ ಸಾಂಗ್ವಾನ್ ಸ್ನೇಹಿತ)ನನ್ನು ಅಂಜುನಾ ಪೊಲೀಸರು ಶನಿವಾರ ಮಪುಸಾ ಪಟ್ಟಣದ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಅವರನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ಮಂಗಳೂರಿನಲ್ಲೂ ರಸ್ತೆಗುಂಡಿಗಳ ದರ್ಬಾರ್- ಹೊಂಡ ಫೋಟೋ ಕಳಿಸಿದ್ರೆ ಸಿಗುತ್ತೆ ಬಹುಮಾನ
ಆರೋಪಿಗಳು ಸೋನಾಲಿಗೆ ಗೋವಾದ ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದಾಗ ಬಲವಂತವಾಗಿ ಮಾದಕ ದ್ರವ್ಯ ನೀಡಿರುವುದಾಗಿ ತಪ್ಪೊಪ್ಪಿಕೊಂಡಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.