-ನೆರೆಯ ರಾಷ್ಟ್ರಗಳ ಶಾಂತಿ, ಸಮೃದ್ಧಿ ಬಯಸುವ ಭಾರತ
ನವದೆಹಲಿ: ಬಾಂಗ್ಲಾದೇಶದಲ್ಲಿನ (Bangladesh) ರಾಜಕೀಯ ಅಶಾಂತಿ, ಅಲ್ಲಿನ ಹಿಂದೂಗಳ (Hindus) ಸುರಕ್ಷತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಈ ವೇಳೆ, ತನ್ನ ನೆರೆಯ ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಭಾರತದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಬಾಂಗ್ಲಾದಲ್ಲಿ ತ್ವರಿತವಾಗಿ ಶಾಂತಿಯ ಮರುಸ್ಥಾಪನೆಗಾಗಿ ಜನ ಆಶಿಸುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿಯು ಬೇಗನೆ ಸಾಮಾನ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ನೆರೆಯ ರಾಷ್ಟ್ರದಲ್ಲಿ ಆದ ಹಿಂಸಾಚಾರದ ಬಗ್ಗೆ ನಾನು ಅರ್ಥಮಾಡಿಕೊಳ್ಳಬಲ್ಲೆ. ಅಲ್ಲಿನ ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ. ಭಾರತದ 140 ಕೋಟಿ ಜನ ಅಲ್ಲಿನ ಹಿಂದೂಗಳ ಬಗ್ಗೆ ಆತಂಕದಲ್ಲಿದ್ದಾರೆ ಎಂದರು.
ಭಾರತವು ಯಾವಾಗಲೂ ನಮ್ಮ ನೆರೆಯ ದೇಶಗಳು ಸಮೃದ್ಧಿ ಮತ್ತು ಶಾಂತಿಯ ಹಾದಿಯಲ್ಲಿ ನಡೆಯಬೇಕೆಂದು ಬಯಸುತ್ತದೆ ಎಂದಿದ್ದಾರೆ.