ಮಂಡ್ಯ: ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮನೆಯವರು ಆತಂಕಕ್ಕೆ ಒಳಗಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಪುಟ್ಟಸ್ವಾಮಿ ಎಂಬವರ ಮನೆಯ ಗೋಡೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ಅಪಾಯವಾಗಿಲ್ಲ.
ಸದ್ಯ ಮನೆ ಕಳೆದುಕೊಂಡಿರುವ ರೈತ ಪುಟ್ಟಸ್ವಾಮಿ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಮನೆಯ ಗೋಡೆ ಕುಸಿತದಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು ಪರಿಹಾರಕ್ಕಾಗಿ ರೈತ ಕುಟುಂಬ ಆಗ್ರಹಿಸಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.