ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಈಗ ಯುದ್ಧ ಆರಂಭವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
Advertisement
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಿಯಾಂಕಾ ಗಾಂಧಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ. ಇದಕ್ಕೆ ವಿರುದ್ಧವಾಗಿ ಸಿದ್ದರಾಮಯ್ಯ ಚೇಲಾಗಳು ಸಿದ್ದರಾಮಯ್ಯನ ಮುಖ್ಯಮಂತ್ರಿ ಮಾಡಬೇಕೆಂಬ ಉದ್ದೇಶದಿಂದ ಸಿದ್ದು ಬ್ರಿಗೇಡ್ ಆರಂಭಿಸಿದ್ದಾರೆ. ಹೀಗಾಗಿ ಡಿಕೆಶಿ ಹಾಗೂ ಸಿದ್ದು ನಡುವೆ ಯುದ್ಧ ಈಗ ಆರಂಭವಾಗಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ, ಕಟೀಲ್‌ಗೆ ತರಾಟೆ – ಅಭಿವೃದ್ಧಿ ಬಗ್ಗೆ ಮಾತಾಡಿ ಎಂದು ಆರ್‌ಎಸ್‌ಎಸ್ ಚಾಟಿ
Advertisement
Advertisement
ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಉತ್ತರಪ್ರದೇಶದ ಚುನಾವಣೆಯ ಉಸ್ತುವಾರಿಯನ್ನು ಪ್ರಿಯಾಂಕಾ ಗಾಂಧಿ ಅವರಿಗೆ ವಹಿಸಿತ್ತು. ಅಲ್ಲಿ 397 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಠೇವಣಿಯನ್ನೂ ಉಳಿಸಿಕೊಳ್ಳಲಿಲ್ಲ. ಇದಕ್ಕೆ ಪ್ರಿಯಾಂಕಾ ಗಾಂಧಿಯವರೇ ಕಾರಣ. ಕಾಂಗ್ರೆಸ್ ಸೋಲಿನಲ್ಲಿ ಅವರ ಪಾತ್ರ ಬಹಳ ಇದೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕೃತ ವಿಪಕ್ಷವಾಗಿದೆ. ರಾಜ್ಯಸಭೆಗೆ ಸ್ಪರ್ಧಿಸಿದರೆ ಪ್ರಿಯಾಂಕಾ ಗೆಲ್ಲುತ್ತಾರೆ, ರಾಜ್ಯದ ಉಸ್ತುವಾರಿಯನ್ನೂ ವಹಿಸಿಕೊಳ್ಳುತ್ತಾರೆ. ನಂತರ ರಾಜ್ಯದಲ್ಲಿ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲೂ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಆಂಜನೇಯಸ್ವಾಮಿ ಕನ್ನಡ ನಾಡಿನ ಪುತ್ರ: ಬೊಮ್ಮಾಯಿ
Advertisement
ಇಡೀ ದೆಶದಲ್ಲೇ ಕಾಂಗ್ರೆಸ್ ನಿರ್ನಾಮ ಆಗುತ್ತಿರುವಂತೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಕಾಂಗ್ರೆಸ್ ನಿರ್ನಾಮ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.