ಮಂಗಳೂರು: ಈ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಬದಲಾಗಿ ಜೀವ ಉಳಿಸುವ ಸಂಜೀವಿನಿ. ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು ಹಾಕಿಕೊಂಡರೆ ವಿಷವೆಲ್ಲಾ ಇಳಿದು ಬಿಡುತ್ತದೆ. ಆದರೆ ಆ ಬಾವಿಯ ನೀರು ವರ್ಷಕ್ಕೊಂದು ಬಾರಿ ಮಾತ್ರ ಸಿಗೋದು.
Advertisement
ಹೌದು. ಮಂಗಳೂರಿನ ಕಟೀಲು ಸಮೀಪದ ಶಿಬರೂರು (Shibaroor) ಎಂಬಲ್ಲಿರುವ ಶ್ರೀ ಕೊಡಮಣಿತ್ತಾಯ ದೈವಸ್ಥಾನದ (Kodamanithaya Daiva) ಪವಿತ್ರ ಬಾವಿ ಇದು. ವರ್ಷಕ್ಕೊಂದು ಬಾರಿ ನಡೆಯುವ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಐದು ದಿನಗಳ ಕಾಲ ಮಾತ್ರ ಈ ಬಾವಿಯ ನೀರನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ. ಪುರಾತನ ಕಾಲದಲ್ಲಿ ಸ್ಥಳೀಯ ದೈವೀ ವೈದ್ಯರಾದ ತ್ಯಾಂಪಣ್ಣ ಶೆಟ್ಟಿ ಎಂಬವರು ತನ್ನಲ್ಲಿದ್ದ ವಿಷ ಹೀರುವ ಕಲ್ಲೊಂದನ್ನು ಲೋಕದ ಜನತೆಯ ಒಳಿತಿಗಾಗಿ ಈ ಬಾವಿಗೆ (Well) ಹಾಕಿದ್ದಾರೆ. ಹೀಗಾಗಿ ಆ ಶಕ್ತಿಯಿಂದಲೇ ಈ ಬಾವಿಯ ನೀರು ಯಾವುದೇ ರೀತಿಯ ವಿಷವನ್ನು ಹೀರಿಕೊಳ್ಳುತ್ತದೆ ಅನ್ನುವ ನಂಬಿಕೆ. ಹಿಂದಿನ ಕಾಲದಿಂದ ಇಂದಿನವರೆಗೂ ಉಳಿದುಕೊಂಡು ಬಂದಿದೆ.
Advertisement
Advertisement
ಜಾತ್ರಾ ಮಹೋತ್ಸವದ 5 ದಿನದಲ್ಲಿ ಈ ದೈವಸ್ಥಾನಕ್ಕೆ ಲಕ್ಷಾಂತರ ಭಕ್ತರು ಈ ಪವಿತ್ರ ನೀರನ್ನು ಕೊಂಡೊಯ್ಯಲು ಬರುತ್ತಾರೆ. ವರ್ಷದಲ್ಲಿ ಒಂದು ಸಲ ಮಾತ್ರ ಸಿಗುವ ನೀರನ್ನು ಅಲ್ಲೇ ತೀರ್ಥ ರೂಪದಲ್ಲಿ ಕುಡಿದು ನಂತರ ಕೊಂಡೊಯ್ಯುದು ಮನೆಯಲ್ಲಿ ಸಂಗ್ರಹಿಸಿಡುತ್ತಾರೆ. ಈ ನೀರನ್ನು ಕುಡಿಯುವುದರಿಂದ ವರ್ಷವಿಡೀ ದೇಹದಲ್ಲಿದ್ದ ವಿಷಕಾರಿ ಅಂಶಗಳು ಹೋಗುತ್ತದೆ. ಜೊತೆಗೆ ವಿಷಜಂತುಗಳು ಕಡಿದಂತಹ ಸಂದರ್ಭದಲ್ಲಿ ತಕ್ಷಣ ಈ ನೀರನ್ನು ಕುಡಿದು ನಂತರ ಈ ಕ್ಷೇತ್ರದಲ್ಲೇ ಸಿಗುವ ಮಣ್ಣನ್ನು ನೀರಲ್ಲಿ ಬೆರೆಸಿ ಗಾಯಕ್ಕೆ ಹಚ್ಚಿದರೆ ವಿಷ ಕಾರುತ್ತದೆ ಅನ್ನುವ ನಂಬಿಕೆ ಇಂದಿಗೂ ಉಳಿದಿದೆ. ನಾನಾ ಊರುಗಳಿಂದ ಬರುವ ಭಕ್ತರು ಈ ಆಧುನಿಕ ಯುಗದಲ್ಲೂ ಈ ನಂಬಿಕೆಯನ್ನು ಇಟ್ಟು ನೀರು ಹಾಗೂ ಮಣ್ಣನ್ನು ಕೊಂಡೊಯ್ಯಲು ಮುಗಿ ಬೀಳುತ್ತಾರೆ. ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ – ಕುಡಿದು ವಾಹನ ಚಾಲನೆ ಮಾಡಿದ್ರೆ ಜಪ್ತಿಯಾಗುತ್ತೆ ವಾಹನ
Advertisement
ಈ ಪವಿತ್ರ ನೀರಿಗೆ ಒಂದು ವರ್ಷಗಳ ಕಾಲ ಶಕ್ತಿ ಇರುತ್ತದೆ. ಹೀಗಾಗಿ ಪ್ರತಿ ವರ್ಷವೂ ಹೊಸ ನೀರನ್ನು ಹಾಗೂ ಮಣ್ಣನ್ನು ಕೊಂಡೊಯ್ಯಲು ಭಕ್ತರು ಜಾತ್ರಾ ಸಂದರ್ಭದಲ್ಲಿ ಇಲ್ಲಿಗೆ ಬರುತ್ತಾರೆ. ಇಂದಿಗೂ ಹಳ್ಳಿ ಪ್ರದೇಶದ ಜನ ವಿಷ ಜಂತುಗಳ ಕಡಿತಕ್ಕೊಳಗಾದರೆ ಈ ನೀರು ಹಾಗೂ ಮಣ್ಣಿನ ಮೊರೆ ಹೋಗುತ್ತಾರೆಯೇ ಹೊರತು ಆಸ್ಪತ್ರೆಗೆ ಹೋಗೋದಿಲ್ಲ. ಒಟ್ಟಿನಲ್ಲಿ ಈಗಿನ ಕಾಲದಲ್ಲೂ ಇಂತಹ ನಂಬಿಕೆ ಉಳಿಯಬೇಕಿದ್ದರೆ ಈ ಕ್ಷೇತ್ರದಲ್ಲಿ ಹಾಗೂ ಬಾವಿಯಲ್ಲಿ ದೈವಿ ಶಕ್ತಿ ಇದೆ ಅನ್ನೋದರಲ್ಲಿ ಸಂದೇಹವಿಲ್ಲ.