ನಿನ್ನೆಯಷ್ಟೇ ರಜನಿಕಾಂತ್ (Rajinikanth) ನಟನೆಯ ‘ಜೈಲರ್’ (Jailer) ಸಿನಿಮಾದ ಹಾಡುಗಳು ಬಿಡುಗಡೆ (Song Release) ಕಾರ್ಯಕ್ರಮ ನಡೆಯಿತು. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಜನಿಕಾಂತ್ ಸೇರಿದಂತೆ ಸಾಕಷ್ಟು ಗಣ್ಯರು ಹಾಜರಿದ್ದರು. ಈ ಸಂದರ್ಭದಲ್ಲಿ ಮನಬಿಚ್ಚಿ ಮಾತನಾಡಿದ ರಜನಿ, ಅಭಿಮಾನಿಗಳು ತಮ್ಮನ್ನು ಅಭಿಮಾನದಿಂದ ಕರೆಯುವ ‘ಸೂಪರ್ ಸ್ಟಾರ್’ (Super Star) ಪದವನ್ನು ಕಿತ್ತುಹಾಕಿ ಎಂದು ಹೇಳಿದ್ದರ ಕುರಿತು ಮಾತನಾಡಿದರು.
‘ಈ ಸೂಪರ್ ಸ್ಟಾರ್ ಪದ ಯಾವಾಗಲೂ ನನಗೆ ಸಮಸ್ಯೆಯನ್ನುಂಟು ಮಾಡಿದೆ. ಜೈಲರ್ ಸಿನಿಮಾದ ಹಾಡಿನಲ್ಲೂ ಸೂಪರ್ ಸ್ಟಾರ್ ಎನ್ನುವ ಪದ ನುಸುಳಿದೆ. ಸಾಹಿತ್ಯ ಬರೆದಿರುವ ಸೂಪರ್ ಸುಬು ಅವರಿಗೆ ಹೇಳಿದ್ದೆ. ನನಗೂ ಈ ಸೂಪರ್ ಸ್ಟಾರ್ ಪದಕ್ಕೂ ಯಾಕೋ ಕೂಡಿ ಬರುತ್ತಿಲ್ಲ’ ಎಂದು ನುಡಿದರು. ಜೊತೆಗೆ ಜೈಲರ್ ಸಿನಿಮಾದ ನಿರ್ದೇಶಕ ನೆಲ್ಸನ್ ಅವರನ್ನು ಈ ಸಿನಿಮಾದಿಂದ ತೆಗೆದುಹಾಕಿ ಎಂದೆಲ್ಲ ವಿರೋಧ ಬಂತು. ಅದಕ್ಕೆ ನಾನು ಒಪ್ಪಲಿಲ್ಲ ಎನ್ನುವ ಮಾತುಗಳನ್ನೂ ಅವರು ಆಡಿದರು. ಇದನ್ನೂ ಓದಿ:ದುಲ್ಕರ್ ಸಲ್ಮಾನ್ ಚಿತ್ರಕ್ಕೆ ‘ಲಕ್ಕಿ ಬಾಸ್ಕರ್’ ಟೈಟಲ್ ಫಿಕ್ಸ್
ಒಂದು ಕಡೆ ಸಿನಿಮಾದ ಹಾಡುಗಳ ಸಂಭ್ರಮ ಜೋರಾಗಿದ್ದರೆ ಮತ್ತೊಂದು ಕಡೆ ಚಿತ್ರದ ಟೈಟಲ್ (Title) ಕುರಿತು ಸಂಕಷ್ಟ ಎದುರಾಗಿದೆ. ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದ್ದು, ಈ ಸಂದರ್ಭದಲ್ಲಿ ಮಲಯಾಳಂ (Malayalam) ನಿರ್ದೇಶಕರೊಬ್ಬರು ಟೈಟಲ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ.
ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ (Sakkir Madattilla) ‘ಜೈಲರ್’ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಕೂಡ ಬಿಡುಗಡೆಗೆ ಸಿದ್ಧವಾಗಿತ್ತು. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರೆದಿತ್ತು.
ಈಗ ಸಕ್ಕಿರ್ ಮಡತ್ತಿಲ್ಲ ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಜೊತೆ ಜೊತೆಗೆ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಿಲೀಸ್ ದಿನವೇ ಮಲಯಾಳಂನಲ್ಲಿ ತಮ್ಮ ಜೈಲರ್ ಚಿತ್ರವನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ. ಆಗಸ್ಟ್ 10ಕ್ಕೆ ತಮ್ಮ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]