ದೇಶದಾದ್ಯಂತ ಇಂದು ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲಿ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದಾರೆ. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.
ಈಗಾಗಲೇ ವಿವಾದಕ್ಕೆ (Controversy) ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ (Communist)ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಇದನ್ನೂ ಓದಿ:ರಾಜಕೀಯಕ್ಕೆ ಅಖಾಡಕ್ಕೆ ರಮೇಶ್ ಅರವಿಂದ್? ಸ್ಪಷ್ಟನೆ ನೀಡಿದ ನಟ
ಕಳೆದ ಮೂರು ವಾರಗಳಿಂದ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಸಾಕಷ್ಟು ಪರ ವಿರೋಧದ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿರುವುದು ಸತ್ಯ ಎಂದು ಚಿತ್ರತಂಡ ಹೇಳಿಕೊಂಡರೆ, ಅದು ಕಪೋಕಲ್ಪಿತ ಕಥೆ ಎಂದು ಹಲವರು ವಾದಿಸುತ್ತಿದ್ದಾರೆ. ಈ ಸಿನಿಮಾ ಪ್ರದರ್ಶನಕ್ಕೆ ತಡೆಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಲಾಗಿತ್ತು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಿಸಿತ್ತು. ಹೈಕೋರ್ಟ್ ಗೆ ಹೋಗಲು ಸೂಚನೆ ನೀಡಿತ್ತು. ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.
ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.