ಶಿವಮೊಗ್ಗ: ಕನ್ನಡದ ಹಿರಿಯ ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ಅವರು ಸಾಗರ ತಾಲೂಕಿನ ಹೆಗ್ಗೋಡು ಗ್ರಾಮದ ತಮ್ಮ ನಿವಾಸದಲ್ಲಿ ನಿಧನರಾದರು.
ಮೃತರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ. ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯಿಂದ ಜಂಬೆ ಅವರು ಪದವಿ ಪಡೆದಿದ್ದರು. ನಂತರ ಅಲ್ಲಿಯೇ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
ಹೆಗ್ಗೋಡಿನ ನೀನಾಸಂ ರಂಗ ಶಿಕ್ಷಣ ಕೇಂದ್ರ, ಸಾಣೇಹಳ್ಳಿಯ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಮೈಸೂರು ರಂಗಾಯಣದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

