ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ (Talacauvery) ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ (Cauvery Theerthodbhava) ಮುಹೂರ್ತ ಫಿಕ್ಸ್ ಆಗಿದೆ.
ಕೊಡಗಿನ (Kodagu) ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅ.17 ರಂದು ಗುರುವಾರ ಬೆಳಗ್ಗೆ 7:40 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಇದನ್ನೂ ಓದಿ: ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜೊತೆ ಚರ್ಚೆ: ಕುಮಾರಸ್ವಾಮಿ ಭರವಸೆ
ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಸಿದ್ಧತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ.
ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.26 ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. ಇದುವರೆಗೂ ಕಾವೇರಿ ಭಕ್ತರ ಉತ್ಸಾಹಕ್ಕೆ ಯಾವುದೇ ಅಡ್ಡಿಯಾಗಿರಲಿಲ್ಲ. ಈ ಬಾರಿ ಬೆಳಗ್ಗೆ ತೀರ್ಥೋದ್ಭವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಗಣೇಶನನ್ನು ಕಾಂಗ್ರೆಸ್ ಸರ್ಕಾರ ಪೊಲೀಸ್ ವ್ಯಾನ್ ಕಂಬಿ ಹಿಂದೆ ಹಾಕಿದೆ: ಮೋದಿ ವಾಗ್ದಾಳಿ