ಮಡಿಕೇರಿ: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ (Kodagu) ತಲಕಾವೇರಿಯಲ್ಲಿ (Talakaveri) ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಕಾವೇರಿ, ತೀರ್ಥರೂಪಿಣಿಯಾಗಿ ಆವಿರ್ಭವಿಸಲಿದ್ದಾಳೆ.
Advertisement
ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯ ಕಾಲದಲ್ಲಿ ತೀರ್ಥೋದ್ಭವ ನಡೆಯಲಿದೆ. ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಸಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.
Advertisement
Advertisement
ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತದೆ. ಸಂಜೆ 4 ಗಂಟೆಯ ಬಳಿಕ ಬ್ರಹ್ಮಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಮೋದಿ ಆರಿಸಿ ತಂದರೆ ಉಳಿತೀರಿ, ಇಲ್ಲ ಅಂದ್ರೆ ಉಳಿಯಲ್ಲ: ಮಹಾಲಿಂಗೇಶ್ವರ ಶ್ರೀ
Advertisement
ಇಂದು ಸಂಜೆ 4 ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಆದರೆ ಭಕ್ತರ ಪ್ರಯಾಣಕ್ಕೆ ಉಚಿತ ಕೆಎಸ್‍ಆರ್ ಟಿಸಿ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್‍ಗಳನ್ನ ಹಾಕಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಕಟ್ಟೆಚ್ಚರವಹಿಸಲಾಗುತ್ತದೆ. ಭದ್ರತೆಗಾಗಿ ಕೆಎಸ್‍ಆರ್‍ಪಿ ಮತ್ತು ಡಿಎಆರ್ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅಲ್ಲದೆ ಈ ಬಾರಿ ತೀರ್ಥ ಕೊಂಡೊಯ್ಯಲು ಪ್ಲಾಸ್ಟಿಕ್ ಬಿಂದಿಗೆ ಬಾಟಲಿ ಡಬ್ಬಗಳನ್ನು ತರುವುದನ್ನು ನಿಷೇಧಿಸಲಾಗಿದೆ.
ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ದೇವಸ್ಥಾನ ಸಮಿತಿ ಒಟ್ಟಾಗಿ ಕಾವೇರಿ (Cauvery) ಜಾತ್ರೆಯನ್ನು ಯಶಸ್ಸುಗೊಳಿಸಲು ಸಜ್ಜಾಗಿದೆ.
Web Stories