ಕೋಲಾರ: ಮುಳಬಾಗಿಲು ತಾಲೂಕಿನ ಕೋಲದೇವಿ ಗ್ರಾಮದಲ್ಲಿರುವ ದೇಶದಲ್ಲಿಯೇ ಏಕೈಕವಾಗಿರೋ ಗರುಡ ದೇವಾಲಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಬುಧವಾರ ತಡರಾತ್ರಿ ದೇವಾಲಯದ ಹಿಂಬದಿ ಗೋಡೆ ಒಡೆದು, ಕಳ್ಳರು ದೇವಾಲಯದ ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ದೇವಸ್ಥಾನದ ಹುಂಡಿಯನ್ನು ಒಡೆದು, ಸಾವಿರಾರು ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ.
ಇಂದು ಬೆಳಗ್ಗೆ ಎಂದಿನಂತೆ ಅರ್ಚಕರು ದೇವಾಲಯಕ್ಕೆ ಪೂಜೆಗೆಂದು ತೆರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಘಟನಾ ಸಂಬಂಧ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv