ಬೆಂಗಳೂರು: ಸಂಗೀತ ನಿರ್ದೇಶಕ ರಿಕ್ಕಿ ಕೇಜ್ (Ricky Kej) ಮನೆಯಲ್ಲಿ ಸಂಪ್ ಮುಚ್ಚಳ ಕದ್ದಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಕದ್ದಿದ್ದ ಸಂಪ್‌ನ ಮುಚ್ಚಳವನ್ನು 700 ರೂ.ಗೆ ಗುಜರಿ ಅಂಗಡಿಗೆ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು
ಈ ಕುರಿತು ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರು ಎಕ್ಸ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡು, ಕಳ್ಳತನದ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಜೊತೆಗೆ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಇಂದಿರಾನಗರ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ. ಕಳ್ಳತನದಲ್ಲಿ ಬಾಗಿಯಾಗಿದ್ದ ಇನ್ನೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

