ಬೆಂಗಳೂರು: ಹಾಡಹಗಲೇ ಕಾರಿನ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್‌ವೊಂದಕ್ಕೆ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಬದಿ ಪಾರ್ಕ್ ಮಾಡಿ ಶಾಪಿಂಗ್, ಬ್ಯಾಂಕ್ (Bank) ಕೆಲಸಕ್ಕೆಂದು ಹೋಗುವವರನ್ನು ಈ ಖತರ್ನಾಕ್ ಕಳ್ಳರ ಗ್ಯಾಂಗ್ ಟಾರ್ಗೆಟ್ ಮಾಡುತ್ತಿತ್ತು. ಪಾರ್ಕಿಂಗ್ ಮಾಡಿ ನಿಲ್ಲಿಸುತ್ತಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಲ್ಯಾಪ್‌ಟಾಪ್(Laptop), ಬ್ಯಾಗ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಎತ್ತೊಯ್ಯುತ್ತಿತ್ತು. ಇದನ್ನೂ ಓದಿ: ಮೈಸೂರು ದಸರಾ 2024| ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು
Advertisement
Advertisement
ಗುರುವಾರ ಇದೇ ಕಳ್ಳರ ಗ್ಯಾಂಗ್ ಇಂದಿರಾನಗರದಲ್ಲಿ (Indiranagara) ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಬ್ಯಾಗ್ ಕಳ್ಳತನ ಮಾಡಿತ್ತು. ಖದೀಮರು ಕಳ್ಳತನ ಮಾಡುತ್ತಿರುವ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
Advertisement
Advertisement
ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿತೀಶ್ ಕುಮಾರ್ ಪಕ್ಷದ ನಾಯಕ ತ್ಯಾಗಿ JDU ವಕ್ತಾರ ಸ್ಥಾನಕ್ಕೆ ರಾಜೀನಾಮೆ